ಸೋಮವಾರಪೇಟೆ, ಆ. ೨೪: ಕಳೆದ ೭೦ ವರ್ಷಗಳಿಂದ ಕಾಂಗ್ರೆಸ್ ಸರ್ಕಾರ ಸ್ಥಾಪಿಸಿದ್ದ ಹಲವಷ್ಟು ಸರ್ಕಾರಿ ಸಂಸ್ಥೆಗಳನ್ನು ಈಗಿನ ಬಿಜೆಪಿ ಸರ್ಕಾರ ಖಾಸಗಿಯವರಿಗೆ ಮಾರಾಟ ಮಾಡುವ ಮೂಲಕ ಜನವಿರೋಧಿ ಆಡಳಿತ ನಡೆಸುತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಆರೋಪಿಸಿದರು.
ಇಲ್ಲಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಷ್ಟಿçÃಕರಣಗೊಂಡಿದ್ದ ಸರ್ಕಾರಿ ಸಂಸ್ಥೆಗಳನ್ನು ನರೇಂದ್ರ ಮೋದಿ ಅವರು ಖಾಸಗಿಯವರಿಗೆ ಮಾರಾಟ ಮಾಡುತ್ತಿದ್ದಾರೆ. ಈ ಬಗ್ಗೆ ಪ್ರಶ್ನೆ ಮಾಡಿದವರಿಗೆ ದೇಶದ್ರೋಹಿಗಳ ಪಟ್ಟ ಕಟ್ಟುತ್ತಿದ್ದಾರೆ ಎಂದು ದೂರಿದರು.
ದೇಶಾದ್ಯಂತ ಪೆಟ್ರೋಲ್, ಡೀಸೆಲ್, ಗ್ಯಾಸ್, ಆಹಾರ ಪದಾರ್ಥಗಳ ಬೆಲೆ ಗಗನಕ್ಕೇರಿದೆ. ಜನಸಾಮಾನ್ಯರ ನೋವಿಗೆ ಸರ್ಕಾರ ಸ್ಪಂದಿಸುತ್ತಿಲ್ಲ. ಹೋರಾಟಗಾರರನ್ನು ಬಗ್ಗುಬಡಿಯಲಾಗುತ್ತಿದೆ. ಕೋಮುವಾದಿಗಳ ಅಟ್ಟಹಾಸ ಮಿತಿಮೀರಿದೆ. ಅಲ್ಪಸಂಖ್ಯಾತರು, ದಲಿತರ ಮೇಲೆ ನಿರಂತರ ಹಲ್ಲೆಗಳು ನಡೆಯುತ್ತಿವೆ ಎಂದು ಧರ್ಮಜ ಉತ್ತಪ್ಪ ಆರೋಪಿಸಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟ ಯೋಜನೆಗಳಿಂದ ಜನಸಾಮಾನ್ಯರು ಒಂದಷ್ಟು ನೆಮ್ಮದಿಯಾಗಿದ್ದರು. ಈಗಿನ ರಾಜ್ಯ ಸರ್ಕಾರ ಬಡವರ ಬಿ.ಪಿ.ಎಲ್. ಕಾರ್ಡ್ಗಳನ್ನು ಕಿತ್ತುಕೊಳ್ಳುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷವನ್ನು ಗ್ರಾಮ ಮಟ್ಟದಿಂದ ಸಂಘಟಿಸುವ ಮೂಲಕ ಮುಂದಿನ ಚುನಾವಣೆಗಳಲ್ಲಿ ಅಧಿಕಾರಕ್ಕೆ ತರಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಸಭೆಯಲ್ಲಿ ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷ ಬಿ.ಬಿ.ಸತೀಶ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ಗೌಡ, ನಗರ ಅಧ್ಯಕ್ಷ ಎಚ್.ಎ.ನಾಗರಾಜ್, ಬ್ಲಾಕ್ ಮಾಜಿ ಅಧ್ಯಕ್ಷ ಕೆ.ಎಂ.ಲೋಕೇಶ್, ವೀರಾಜಪೇಟೆ ಬ್ಲಾಕ್ ಅಧ್ಯಕ್ಷ ನವೀನ್, ಸುಜಿತ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಇದೇ ಸಂದರ್ಭ ವಿವಿಧ ಪಕ್ಷಗಳಿಂದ ಕಾರ್ಯಕರ್ತರು ಯುವ ಕಾಂಗ್ರೆಸ್ ಸೇರ್ಪಡೆಗೊಂಡರು.