ಮಡಿಕೇರಿ, ಆ. ೨೫ : ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ಅವರು ತಾ. ೨೭ ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಬೆಳಿಗ್ಗೆ ೧೦.೩೦ ಗಂಟೆಗೆ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ದಶವರ್ಷ ಸಂಭ್ರಮವನ್ನು ಉದ್ಘಾಟಿಸಲಿದ್ದಾರೆ. ನಂತರ ಮಧ್ಯಾಹ್ನ ೧೨ ಗಂಟೆಗೆ ಕಗ್ಗೋಡ್ಲುವಿನ ಪ್ರಗತಿ ಪರ ರೈತ ಮಂದ್ರೀರ ತೇಜಸ್ ನಾಣಯ್ಯ ಅವರ ಕಚೇರಿಗೆ ಭೇಟಿ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ ೧.೪೫ ಗಂಟೆಗೆ ಗುಡ್ಡೆಹೊಸೂರು ಖಾಸಗಿ ರೆಸಾರ್ಟ್ ನಲ್ಲಿ ಇಲಾಖಾಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ನಂತರ ಮಧ್ಯಾಹ್ನ ಹಾರಂಗಿ ಮೀನುಮರಿ ಪಾಲನಾ ಕೇಂದ್ರಕ್ಕೆ ಭೇಟಿ ಮಹಶೀರ್ ಮೀನುಮರಿ ಉತ್ಪಾದನಾ ಪ್ರಕ್ರಿಯೆ ವೀಕ್ಷಣೆ ಮಾಡಲಿದ್ದಾರೆ. ಸಂಜೆ ೪.೧೫ ಗಂಟೆಗೆ ಗರಂದೂರು ಎಂ.ಟಿ. ವಿಜಯೇಂದ್ರ ಅವರ ಮೀನು ಕೃಷಿ ಕೊಳಗಳಿಗೆ ಭೇಟಿ ಹಾಗೂ ಚರ್ಚೆ ನಡೆಸಲಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಎಂ. ಮಲ್ಲಿಕಾರ್ಜುನ ತಿಳಿಸಿದ್ದಾರೆ.