ವೀರಾಜಪೇಟೆ, ಆ. ೨೫: ಪ್ರತಿಯೊಬ್ಬರೂ ಸ್ವಚ್ಛತೆಗೆ ಮೊದಲು ಆದ್ಯತೆ ನೀಡಿ, ಪೌಷ್ಟಿಕಾಂಶವಿರುವ ತರಕಾರಿ, ಮೊಳಕೆಬರಿಸಿದ ಕಾಳು ಹಾಗೂ ಹಣ್ಣು ಸೇವಿಸುವುದರಿಂದ ದೇಹಕ್ಕೆ ಹೆಚ್ಚಿನ ಪೌಷ್ಟಿಕಾಂಶ ದೊರೆಯುತ್ತದೆ ಎಂದು ಕಣ್ಣಂಗಾಲ ಗ್ರಾಮ ಪಂಚಾಯಿತಿ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ಹೇಮಾವತಿ ಹೇಳಿದರು.

ವೀರಾಜಪೇಟೆ ತಾಲೂಕಿನ ಅಮ್ಮತ್ತಿ ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಭೂಮಿ ಜ್ಞಾನ ವಿಕಾಸ ಕೇಂದ್ರದ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿ ಕಣ್ಣಂಗಾಲ ಗ್ರಾಮದ ಸಮುದಾಯ ಭವನದಲ್ಲಿ ನಡೆದ ಪೌಷ್ಟಿಕ ಆಹಾರ ಮೇಳ ಕಾರ್ಯಕ್ರಮ ಮತ್ತು ವರಮಹಾಲಕ್ಷಿö್ಮ ಪೂಜಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಡಾ. ಹೇಮಾವತಿ ಅವರು ಪೌಷ್ಟಿಕ ಆಹಾರದ ಕುರಿತು ಸಮರ್ಪಕವಾಗಿ ಮಾಹಿತಿ ಪಡೆದು ದಿನೋಪಯೋಗಿ ವಸ್ತುಗಳಾಗಿ ಉಪಯೋಗಿಸಿದರೆ ಜೀವನದಲ್ಲಿ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು.

ವೀರಾಜಪೇಟೆ ತಾಲೂಕಿನ ಯೋಜನಾಧಿಕಾರಿ ಪದ್ಮಯ್ಯ ಮಾತನಾಡಿ ಮಹಿಳೆಯರ ಜ್ಞಾನ ಹೆಚ್ಚಿಸುವ ನಿಟ್ಟಿನಲ್ಲಿ ಮಹಿಳಾ ಜ್ಞಾನ ವಿಕಾಸ ಕೇಂದ್ರ ರಚಿಸಿದ್ದು ಪ್ರತೀ ತಿಂಗಳು ಒಂದೊAದು ವಿಷಯದ ಬಗ್ಗೆ ಸಂಪನ್ಮೂಲ ವ್ಯಕ್ತಿ ಮತ್ತು ಜ್ಞಾನ ವಿಕಾಸ ಸಮನ್ವಯ ಅಧಿಕಾರಿಗಳಿಂದ ಮಾಹಿತಿ ಕೊಡಿಸುತ್ತಿದ್ದು, ಇದರ ಸದುಪಯೋಗ ಪಡಿಸಿಕೊಳ್ಳುವ ಬಗ್ಗೆ ಮಾಹಿತಿಯನ್ನು ನೀಡಿದರು.

ಕಣ್ಣಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಗಣೇಶ್ ಮಾತನಾಡಿದರು. ಭೂಮಿ ಜ್ಞಾನ ವಿಕಾಸ ಕೇಂದ್ರದ ಅಧ್ಯಕ್ಷೆ ಬಿ.ಎಸ್. ರೇಖಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ಆರ್. ಶ್ರೇಯ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಂಘದ ಸದಸ್ಯರು ವಿವಿಧ ಬಗೆಯ ಸೊಪುö್ಪ, ತರಕಾರಿಗಳಿಂದ ತಯಾರಿಸಿದ ಖಾದ್ಯಗಳನ್ನು ಪ್ರದರ್ಶಿಸಿದರು. ಸೇವಾ ಪ್ರತಿನಿಧಿ ಸವಿತಾ ಸ್ವಾಗತಿಸಿ ಕೇಂದ್ರದ ಸದಸ್ಯೆ ಧನ್ಯವಾದವಿತ್ತರು.

ಈ ಸಂದರ್ಭ ಆಶಾ ಕಾರ್ಯಕರ್ತೆ ಕವಿತಾ ಸೇರಿದಂತೆ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮಕ್ಕೂ ಮೊದಲು ಕೇಂದ್ರದ ವತಿಯಿಂದ ವರಮಹಾಲಕ್ಷಿö್ಮ ಪೂಜೆ ಆಚರಣೆ ಮಾಡಲಾಯಿತು.