ಸೋಮವಾರಪೇಟೆ, ಆ. ೨೫: ಪ್ರಬುದ್ಧ ಮನಸ್ಸು, ಪ್ರಬುದ್ಧ ಸಮಾಜ ಹಾಗೂ ಜನರ ಜೀವನ ಮಟ್ಟ ಸುಧಾರಣೆಯ ಗುರಿಯೊಂದಿಗೆ ಸಮಾಜದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬೆಂಗಳೂರಿನ ಹೆಚ್.ಕೆ. ವಿವೇಕಾನಂದ ಅವರು ಕೈಗೊಂಡಿರುವ ಪಾದಯಾತ್ರೆಗೆ ಸೋಮವಾರಪೇಟೆಯಲ್ಲಿ ಸ್ವಾಗತ ಕೋರಲಾಯಿತು. ಬೀದರ್‌ನಿಂದ ಪ್ರಾರಂಭಗೊAಡಿರುವ ಪಾದಯಾತ್ರೆ ಕುಶಾಲನಗರದಿಂದ ಸೋಮವಾರಪೇಟೆಗೆ ಆಗಮಿಸಿದ ಸಂದರ್ಭ ಕಕ್ಕೆಹೊಳೆ ಜಂಕ್ಷನ್ ಬಳಿಯಲ್ಲಿ ಸ್ವಾಗತಿಸಲಾಯಿತು.

ನಂತರ ಕಕ್ಕೆಹೊಳೆಯಿಂದ ಪಟ್ಟಣದ ಪ್ರಮುಖ ಮಾರ್ಗದಲ್ಲಿ ವಿವೇಕಾನಂದ ಅವರೊಂದಿಗೆ ಸ್ಥಳೀಯ ಪ್ರಮುಖರು ಹೆಜ್ಜೆ ಹಾಕಿದರು. ನಂತರ ಇಲ್ಲಿನ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಸಂವಾದ ಕಾರ್ಯಕ್ರಮ ನಡೆಯಿತು. ಲಯನ್ಸ್ ಸಂಸ್ಥೆಯ ಅಧ್ಯಕ್ಷ ಸಿ.ಕೆ. ಮಲ್ಲಪ್ಪ, ರೋಮನ್ ಕ್ಯಾಥೋಲಿಕ್ ಸಂಸ್ಥೆಯ ಜಿಲ್ಲಾಧ್ಯಕ್ಷ ಎಸ್.ಎಂ. ಡಿಸಿಲ್ವಾ, ಕಸಾಪ ಅಧ್ಯಕ್ಷ ಹೆಚ್.ಜೆ. ಜವರ, ಮಾಜಿ ಅಧ್ಯಕ್ಷ ಜೆ.ಸಿ. ಶೇಖರ್, ಪ.ಪಂ. ಮಾಜಿ ಅಧ್ಯಕ್ಷೆ ಸುಮಾ ಸುದೀಪ್, ಪ್ರಮುಖರಾದ ವಿ.ಪಿ. ಶಶಿಧರ್, ಡಿ.ಎಸ್. ನಿರ್ವಾಣಪ್ಪ ಸೇರಿದಂತೆ ವಿವಿಧ ಸಂಘ-ಸAಸ್ಥೆಗಳ ಪ್ರಮುಖರು ಭಾಗವಹಿಸಿದ್ದರು.