ಮಡಿಕೇರಿ, ಆ. ೨೫ : ಶಾಸಕ ಕೆ.ಜಿ.ಬೋಪಯ್ಯ ಅವರು ಬೆಂಗಳೂರಿನ ಕಚೇರಿಯಲ್ಲಿ ಇತ್ತೀಚೆಗೆ ಟೋಕಿಯೋ ಒಲಂಪಿಕ್ಸ್ನಲ್ಲಿ ಭಾರತದ ಮಹಿಳಾ ಹಾಕಿ ತಂಡದ ತರಬೇತುದಾರರಾಗಿದ್ದ ಕೊಡಗು ಜಿಲ್ಲೆಯ ಅಂಕಿತಾ ಸುರೇಶ್ ಅವರನ್ನು ಬುಧವಾರ ಅಭಿನಂದಿಸಿದರು.

ಒಲಂಪಿಕ್ಸ್ನಲ್ಲಿ ಹಾಕಿ ತಂಡ ಮುನ್ನೆಡಿಸಿದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಅಂಕಿತಾ ಸುರೇಶ್ ಅವರು ತಾತ್ಕಾಲಿಕ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಶಾಸಕರ ಗಮನಕ್ಕೆ ತಂದರು.

ಈ ಸಂಬAಧ ಕ್ರೀಡಾ ಸಚಿವರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೆ.ಜಿ. ಬೋಪಯ್ಯ ಅವರು ಹೇಳಿದರು.