ಪೊನ್ನಂಪೇಟೆ, ಆ. ೨೫: ಪಶು ವೈದ್ಯಕೀಯ ಇಲಾಖೆಯ ಪೊನ್ನಂಪೇಟೆ ಪಶು ಆಸ್ಪತ್ರೆ ಮತ್ತು ಪೊನ್ನಂಪೇಟೆ ಗ್ರಾಮ ಪಂಚಾಯಿತಿಯ ಸಂಯುಕ್ತ ಆಶ್ರಯದಲ್ಲಿ ತಾ. ೩೦ ರಂದು ಬೆಳಿಗ್ಗೆ ೮ ಗಂಟೆಯಿAದ ೧೧ ಗಂಟೆವರೆಗೆ ನಾಯಿಗಳಿಗೆ ಉಚಿತ ಹುಚ್ಚು ನಾಯಿ ರೋಗ ನಿರೋಧಕ (ರೇಬಿಸ್) ಲಸಿಕೆಯನ್ನು ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪೊನ್ನಂಪೇಟೆ ಪಶು ಆಸ್ಪತ್ರೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರು ತಮ್ಮ ನಾಯಿಗಳಿಗೆ ತಪ್ಪದೆ ರೇಬಿಸ್ ನಿರೋಧಕ ಲಸಿಕೆ ಹಾಕಿಸಿ, ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ೯೪೪೯೦೮೧೩೪೩ ಈ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದು.

ತಾಳತ್ತಮನೆ

ಮಡಿಕೇರಿ: ಪಶು ಪಾಲನಾ ಹಾಗೂ ಪಶು ವೈದ್ಯಕೀಯ ಇಲಾಖೆ, ಮಡಿಕೇರಿ ನೆಹರು ಯುವ ಕೇಂದ್ರ, ತಾಳತ್ತಮನೆ ನೇತಾಜಿ ಯುವಕ ಹಾಗೂ ಯುವತಿ ಮಂಡಳಿ ಸಂಯುಕ್ತ ಆಶ್ರಯದಲ್ಲಿ ತಾ. ೨೭ ರಂದು ಉಚಿತ ರೇಬಿಸ್ ನಿರೋಧಕ ಲಸಿಕಾ ಶಿಬಿರವನ್ನು ಏರ್ಪಡಿಸಲಾಗಿದೆ. ಅಂದು ಬೆಳಿಗ್ಗೆ ೯.೩೦ ರಿಂದ ೧೧.೩೦ಕ್ಕೆ ತಾಳತ್ತಮನೆಯ ಮೈದಾನದಲ್ಲಿ ಲಸಿಕಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರ ನಡೆಯಲಿದ್ದು, ಮಾಲೀಕರು ತಮ್ಮ ನಾಯಿಗಳಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ.