ಮಡಿಕೇರಿ, ಆ. ೨೫: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶೇಷಚೇತನರಿಗೆ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನ ಯೋಜನೆಯನ್ನು ೨೦೨೧-೨೨ನೇ ಸಾಲಿನಿಂದ ಸ್ಟೇಟ್ ಸ್ಕಾಲರ್ಶಿಪ್ ಪೋರ್ಟಲ್ hಣಣಠಿs://ssಠಿ.ಠಿosಣmಚಿಣಡಿiಛಿ. ಞಚಿಡಿಟಿಚಿಣಚಿಞಚಿ.gov.iಟಿ/೨೦೨೧ ರಲ್ಲಿ ೨೦೨೧ ರ ಅಕ್ಟೋಬರ್ ೩೧ ರೊಳಗೆ ಅರ್ಜಿ ಸಲ್ಲಿಸಬೇಕಿದೆ.
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿನ ಎಸ್ಎಸ್ಎಲ್ಸಿ ನಂತರದ (Posಣ meಣಡಿiಛಿ) ವಿಶೇಷಚೇತನ ವಿದ್ಯಾರ್ಥಿಗಳು ಈ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಿ ಇಲಾಖಾ ಯೋಜನೆಯ ಸೌಲಭ್ಯ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರ ಕಚೇರಿ ದೂ. ೦೮೨೭೨-೨೯೫೮೨೯ ನ್ನು ಅಥವಾ ಆಯಾಯ ತಾಲೂಕಿನ ತಾಲೂಕು ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸುವAತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.