ಕೂಡಿಗೆ, ಆ. ೨೬: ಕೂಡು ಮಂಗಳೂರು ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್ ನವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಮೊದಲು ೧೫ನೇ ಹಣಕಾಸು ಯೋಜನೆಯ ವಿವಿಧ ಕಾಮಗಾರಿಗಳ ಕ್ರಿಯಾ ಯೋಜನೆ ಅನುಷ್ಠಾನ ವಿಷಯಗಳ ಬಗ್ಗೆ ಸುದೀರ್ಘವಾಗಿ ಚರ್ಚೆಗಳು ನಡೆದು ಆಯಾ ವಾರ್ಡ್ನ ಕಾಮಗಾರಿಯನ್ನು ಅತಿ ಶೀಘ್ರದಲ್ಲಿ ಕೈಗೊಳ್ಳವ ವಿಚಾರದಲ್ಲಿ ಸಭೆಯಲ್ಲಿ ಹಾಜರಿದ್ದ ಸದಸ್ಯರು ತಮ್ಮ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಯೋಜನೆಯಗಳ ಅನುಗುಣವಾಗಿ ಗ್ರಾಮದ ಅಭಿವೃದ್ಧಿ ಪೂರಕವಾದ ವಿಷಯಗಳ ಬಗ್ಗೆ ಮತ್ತು ವಿವಿಧ ಸಮಸ್ಯೆಗಳ ಬಗ್ಗೆ ಚರ್ಚೆಗಳು ನಡೆದವು. ಗ್ರಾಮದಲ್ಲಿ ಕುಡಿಯುವ ನೀರು ಮತ್ತು ವಸತಿ ರಹಿತರಿಗೆ ಸೌಲಭ್ಯಗಳನ್ನು ಒದಗಿಸುವ ವಿಚಾರಗಳ ಸಭೆಯಲ್ಲಿ ಹಾಜರಿದ್ದ ಸದಸ್ಯರು ತಮ್ಮ ಅಭಿಪ್ರಾಯವನ್ನು ತಿಳಿಸಿದರು. ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಈ ಸಾಲಿನಲ್ಲಿ ರೈತರು ಎರೆಹುಳು ತೊಟ್ಟಿಗಳ ನಿರ್ಮಾಣಕ್ಕೆ ಅನುಕೂಲ ವಾಗುವಂತೆ ಒಬ್ಬ ರೈತರಿಗೆ ತಲಾ ೨೭ ಸಾವಿರ ರೂ ಸಹಾಯಧನ ನೀಡುವ ಬಗ್ಗೆ ಮತ್ತು ಅದರ ಅನುಷ್ಠಾನ ಗೊಳಿಸಲು, ಆಯಾ ವಾರ್ಡ್ ಸದಸ್ಯರು ರೈತರಿಗೆ ತಿಳಿಸುಬೇಕಾದ ಸಮಗ್ರವಾದ ಮಾಹಿತಿಯನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್ ನೀಡಿದರು.

ಸಭೆಯಲ್ಲಿ ಸರಕಾರಿ ಜಾಗದಲ್ಲಿ ಅನಧಿಕೃತ ಮನೆಗಳ ನಿರ್ಮಾಣ ಮಾಡುತ್ತಿರುವ ವಿಷಯಗಳ ಬಗ್ಗೆ ಚರ್ಚೆಗಳು ನಡೆದವು ಅಲ್ಲದೆ ಕೊರೊನಾ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವ ಬಗ್ಗೆ ಚರ್ಚೆಗಳು ನಡೆದವು. ಸಭೆಗೆ ಬಂದ ಅರ್ಜಿಗಳ ವಿಲೇವಾರಿಯ ಬಗ್ಗೆ ಅಭಿವೃದ್ಧಿ ಅಧಿಕಾರಿ ತಿಳಿಸಿದರು.

ಗ್ರಾ.ಪಂ. ಅಧ್ಯಕ್ಷೆ ಇಂದಿರಾ ರಮೇಶ್ ಸರ್ವ ಸದಸ್ಯರ ಸಹಕಾರದೊಂದಿಗೆ ಗ್ರಾ.ಪಂ. ವಿವಿಧ ಅಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಂಡು ಕಾರ್ಯಗತಗೊಳಿಸಲು ಮುಂದಾಗುತ್ತೇವೆ ಎಂದರು.