ಮಡಿಕೇರಿ, ಆ. ೨೬: ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆಯು ಮಂದಗತಿಯಲ್ಲಿ ನಡೆಯುತ್ತಿದ್ದು, ಬೆಳೆ ಸಮೀಕ್ಷೆಯನ್ನು ಚುರುಕುಗೊಳಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ನಿರ್ದೇಶನ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೆಳೆ ಸಮೀಕ್ಷೆ ಪ್ರಗತಿ, ರಸಗೊಬ್ಬರ ಪೂರೈಕೆ ಮತ್ತಿತರ ಕೃಷಿ ಇಲಾಖೆಗೆ ಸಂಬAಧಿಸಿದAತೆ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು.
ಬೆಳೆ ಸಮೀಕ್ಷೆಗೆ ಸಂಬAಧಿಸಿದAತೆ ಜಿಲ್ಲೆಯಲ್ಲಿ ೨.೬೨ ಲಕ್ಷ ಸರ್ವೆ ನಂಬರ್ನಲ್ಲಿ ಬೆಳೆ ಸಮೀಕ್ಷೆಯಾಗಬೇಕಿದ್ದು, ಇದರಲ್ಲಿ ೧,೭೬೨ ಸರ್ವೆ ನಂಬರ್ನಲ್ಲಿ ಬೆಳೆ ಸಮೀಕ್ಷೆ ಆಗಿದೆ. ಆದ್ದರಿಂದ ಸಹಕಾರ ಸಂಘಗಳು, ಸಹಕಾರ ಬ್ಯಾಂಕುಗಳು, ಕಾಫಿ ಮಂಡಳಿ, ಮತ್ತಿತರ ಕೃಷಿ, ತೋಟಗಾರಿಕೆ ಸಂಬAಧಿಸಿದ ಸಂಘ-ಸAಸ್ಥೆಗಳು ಕೈಜೋಡಿಸಿ ಬೆಳೆ ಸಮೀಕ್ಷೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಕೊಡಗು ಜಿಲ್ಲೆಯಲ್ಲಿ ಆರ್ಟಿಸಿಯಲ್ಲಿ ಹಲವರ ಹೆಸರು ಇದ್ದು, ಜಂಟಿ ಖಾತೆಯಲ್ಲಿರುತ್ತದೆ. ಆದ್ದರಿಂದ ಬೆಳೆ ಸಮೀಕ್ಷೆ ಮಾಡುವಾಗ ಎಚ್ಚರ ವಹಿಸುವಂತೆ ಸಲಹೆ ನೀಡಿದರು.
ಈ ಸಂದರ್ಭ ಮಾತನಾಡಿದ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಶಬಾನಾ ಎಂ. ಶೇಖ್, ಆರ್ಟಿಸಿಯಲ್ಲಿ ಜಂಟಿ ಖಾತೆ ಇದ್ದರೂ ಸಹ, ಕುಟುಂಬದ ಒಬ್ಬರ ಹೆಸರಿನಲ್ಲಿ ಬೆಳೆ ಸಮೀಕ್ಷೆ ಮಾಡಬಹುದಾಗಿದೆ ಎಂದರು. ಸಹಕಾರ ಸಂಘಗಳ ಉಪ ನಿಬಂಧಕ ಬಿ.ಕೆ. ಸಲೀಂ ಅವರು ಜಿಲ್ಲೆಯಲ್ಲಿ ೭೩ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿದ್ದು, ಬೆಳೆ ಸಮೀಕ್ಷೆಗೆ ಕೈಜೋಡಿಸಲಿವೆ ಎಂದು ತಿಳಿಸಿದರು.
ಈ ಸಂದರ್ಭ ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿ ನಾರಾಯಣ ರೆಡ್ಡಿ ಬೆಳೆ ಸಮೀಕ್ಷೆ ಸಂಬAಧಿಸಿದAತೆ ಆ್ಯಪ್ನ್ನು ಡೌನ್ಲೋಡ್ ಮಾಡಿಕೊಂಡು, ಕೃಷಿಕರೇ ಬೆಳೆ ಸಮೀಕ್ಷೆ ಕೈಗೊಳ್ಳಬಹುದಾಗಿದೆ ಎಂದರು.
ಜಿಲ್ಲೆಯಲ್ಲಿ ಡಿಎಪಿ, ಎಂಒಪಿ, ಕಾಂಪ್ಲೆಕ್ಸ್ ಮತ್ತಿತರ ರಸಗೊಬ್ಬರಗಳಿಗೆ ಹೆಚ್ಚಿನ ಬೇಡಿಕೆ ಇದೆ. ಜೊತೆಗೆ ಯೂರಿಯಾ, ರಾಕ್ ಪಾಸ್ಟರ್, ಎಸ್ಎಸ್ಪಿ ಮತ್ತಿತರ ರಸಗೊಬ್ಬರಗಳಿಗೆ ಬೇಡಿಕೆ ಇದೆ. ಈ ರಸಗೊಬ್ಬರಗಳನ್ನು ಹೆಚ್ಚಾಗಿ ದಾಸ್ತಾನಿಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಈ ಸಂದರ್ಭ ಮಾತನಾಡಿದ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಶಬಾನಾ ಎಂ. ಶೇಖ್, ೩೯,೯೯೦ ಗುರಿಯಲ್ಲಿ ೩೨,೦೮೨ ಮೆಟ್ರಿಕ್ ಟನ್ ರಸಗೊಬ್ಬರ ಪೂರೈಕೆಯಾಗಿದೆ ಎಂದು ತಿಳಿಸಿದರು. ಮೈಸೂರು, ಹಾಸನ ಹಾಗೂ ಮಂಗಳೂರು ಕಡೆಯಿಂದ ರಸಗೊಬ್ಬರ ಪೂರೈಕೆಯಾಗಲಿದೆ. ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಿದೆ ಎಂದು ಅವರು ಹೇಳಿದರು.
ರಸಗೊಬ್ಬರ ಮಾರಾಟಗಾರರು ರಸಗೊಬ್ಬರ ಪೂರೈಕೆ, ಬೇಡಿಕೆ ಮತ್ತಿತರ ಬಗ್ಗೆ ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದರು. ಒಂದು ಜಿಲ್ಲೆ, ಒಂದು ಬೆಳೆ (ಒಡಿಒಪಿ) ಯೋಜನೆಯಡಿ ಕಾಫಿ ಬೆಳೆ ಆಯ್ಕೆಯಾಗಿದ್ದು, ಆ ನಿಟ್ಟಿನಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಈ ಸಂದರ್ಭ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಆರ್.ಕೆ. ಬಾಲಚಂದ್ರ ಹಲವು ಮಾಹಿತಿ ನೀಡಿದರು. ಕೃಷಿ ಇಲಾಖೆ ತಾಂತ್ರಿಕ ಅಧಿಕಾರಿ ನಾರಾಯಣ ರೆಡ್ಡಿ ಅವರು ಬೆಳೆ ಸಮೀಕ್ಷೆ, ರಸಗೊಬ್ಬರ ಪೂರೈಕೆ ಮತ್ತಿತರ ಬಗ್ಗೆ ಹಲವು ಮಾಹಿತಿ ನೀಡಿದರು. ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಹೆಚ್. ಶಶಿಧರ, ವಿವಿಧ ಇಲಾಖೆ ಅಧಿಕಾರಿಗಳು ಇತರರು ಇದ್ದರು.