ಮಡಿಕೇರಿ, ಆ. ೨೬: ಕಾರ್ಮಿಕರೊಬ್ಬರು ಮರದಿಂದ ಬಿದ್ದು ದುರ್ಮರಣ ಗೊಂಡಿರುವ ಘಟನೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮುಕ್ಕೋಡ್ಲು ಗ್ರಾಮದಲ್ಲಿ ನಡೆದಿದೆ. ಅಲ್ಲಿನ ನಿವಾಸಿ ಹೆಚ್.ಎಸ್. ದೇವಯ್ಯ ಅವರ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ತಮಿಳುನಾಡು ಮೂಲದ ವ್ಯಕ್ತಿ ರಮೇಶ್ ಎಂಬವರೆ ಮೃತವ್ಯಕ್ತಿ.

ಇವರು ಕಳೆದ ೧೬ ದಿನಗಳ ಹಿಂದೆ ದೇವಯ್ಯ ಅವರಲ್ಲಿಗೆ ಆಗಮಿಸಿ ಅವರ ಲೈನ್‌ಮನೆಯಲ್ಲಿ ವಾಸವಿದ್ದರೆಂದು ಪೊಲೀಸರು ತಿಳಿಸಿದ್ದಾರೆ. ಮೃತ ವ್ಯಕ್ತಿಯ ಹೆಸರು ರಮೇಶ್ ಎಂದಷ್ಟೆ ತಿಳಿದಿದ್ದು, ಇವರ ಬಗ್ಗೆ ಯಾವುದೇ ಮಾಹಿತಿಯಿಲ್ಲ ಎಂದು ಮಾಲೀಕರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಮೃತದೇಹ ವನ್ನು ಮಡಿಕೇರಿ ಆಸ್ಪತ್ರೆಯ ಶವಾಗಾರ ದಲ್ಲಿ ಇರಿಸಲಾಗಿದ್ದು, ವಾರಸುದಾ ರರಿದ್ದಲ್ಲಿ ಮಡಿಕೇರಿ ಗ್ರಾಮಾಂತರ ಠಾಣೆ (೨೨೮೭೭೭) ಅಥವಾ ಪೊಲೀಸ್ ಅಧೀಕ್ಷಕರ ಕಚೇರಿಯನ್ನು (೨೨೯೦೦೦) ಸಂಪರ್ಕಿಸುವAತೆ ಪೊಲೀಸ್ ಪ್ರಕಟಣೆ ಕೋರಿದೆ.