ಕುಶಾಲನಗರ. ಆ. ೨೬: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ನಿವೃತ್ತ ಪೊಲೀಸ್ ಬಣ್ಣಾರಿ ರಾಜು ಕುಟುಂಬಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದ ವತಿಯಿಂದ ಸಹಾಯಧನ ವಿತರಿಸಲಾಯಿತು.

ಚಿಕಿತ್ಸಾ ವೆಚ್ಚ ಭರಿಸಲಾಗದೆ ಬಣ್ಣಾರಿ ರಾಜ ಅವರ ಪತ್ನಿ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ನೆರವು ಕೋರಿ ಮನವಿ ಮಾಡಿದರು. ಮನವಿಗೆ ಸ್ಪಂದಿಸಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದ ಮೂಲಕ ವಲಯ ನಿರ್ದೇಶಕ ಯೋಗೇಶ್ ಬಣ್ಣಾರಿ ರಾಜ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ವೈದ್ಯಕೀಯ ಚಿಕಿತ್ಸೆಗಾಗಿ ರೂ. ೨೫ ಸಾವಿರ ಚೆಕ್ ವಿತರಿಸಿದರು.