ಮಡಿಕೇರಿ, ಆ. ೨೬: ಜಿಲ್ಲೆಯಲ್ಲಿ ಗುರುವಾರ ೭೩ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ೬೩ ಆರ್ಟಿಪಿಸಿಆರ್ ಮತ್ತು ೧೦ ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ ೧೪, ಸೋಮವಾರಪೇಟೆ ತಾಲೂಕಿನಲ್ಲಿ ೩೦, ವೀರಾಜಪೇಟೆ ತಾಲೂಕಿನಲ್ಲಿ ೨೯ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೩,೩೭೧ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೨೭ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೩೨,೪೨೭ ಮಂದಿ ಗುಣಮುಖರಾಗಿದ್ದಾರೆ. ೫೩೩ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೨ ಸಾವು ಉಂಟಾಗಿದ್ದು, ಇದುವರೆಗೆ ಒಟ್ಟು ೪೧೧ ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್ಮೆAಟ್ ವಲಯಗಳ ಸಂಖ್ಯೆ ೮೪ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.೧.೫೭ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.