ಕೂಡಿಗೆ, ಆ. ೨೭: ಕೂಡಿಗೆಯ ಮೊರಾರ್ಜಿ ವಸತಿ ಶಾಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ತೆರೆಯಲಾದ ಸೋಮವಾರಪೇಟೆ ತಾಲೂಕು ಮಟ್ಟದ ಕೋವಿಡ್ ಸೆಂಟರ್ ಇದುವರೆಗೆ ೧೦,೦೦೦ಕ್ಕೂ ಹೆಚ್ಚು ಸೋಂಕಿತ ವ್ಯಕ್ತಿಗಳಿಗೆ ಉತ್ತಮವಾದ ಚಿಕಿತ್ಸೆ ನೀಡುವ ಮೂಲಕ ಸೋಂಕಿತ ವ್ಯಕ್ತಿಗಳು ಗುಣಮುಖರಾಗಿದ್ದಾರೆ.

ಕೂಡಿಗೆಯಲ್ಲಿರುವ ಕೋವಿಡ್ ಕೇರ್ ಸೆಂಟರ್‌ನಲ್ಲಿ ದಿನದ ೨೪ ಗಂಟೆಗಳಲ್ಲಿ ಸೋಂಕಿತ ವ್ಯಕ್ತಿಗಳಿಗೆ ಅವರುಗಳಿಗೆ ನಿಗದಿ ಮಾಡಿದ ಆರೋಗ್ಯ ಕಿಟ್‌ನ ಔಷಧಿಯನ್ನು ಕ್ರಮಬದ್ದವಾಗಿ ತೆಗೆದುಕೊಳ್ಳುವಂತೆ ಸೂಚನೆ ನೀಡುವುದು. ಸೇರಿದಂತೆ ಎಲ್ಲಾ ರೀತಿಯ ಆರೋಗ್ಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಇದರ ಜೊತೆಯಲ್ಲಿ ಸೋಂಕಿತ ವ್ಯಕ್ತಿಗಳಿಗೆ ದಿನಂಪ್ರತಿ ಆರೋಗ್ಯ ಇಲಾಖೆಯ ವತಿಯಿಂದ ಪ್ರಕಟಿತ ಗುಣಮಟ್ಟದ ಮತ್ತು ಪರಿಮಾಣದಲ್ಲಿ ಉತ್ತಮವಾದ ಆಹಾರವನ್ನು ನೀಡಲಾಗುತ್ತದೆ.

ಸೋಂಕಿತ ವ್ಯಕ್ತಿಗಳಿಗೆ ದಿನಂಪ್ರತಿ ಬೆಳಿಗ್ಗಿನ ೮ ಗಂಟೆಗೆ ತಿಂಡಿ, ಮಧ್ಯಾಹ್ನ ಸೇರಿದಂತೆ ರಾತ್ರಿ ಊಟದ ವ್ಯವಸ್ಥೆ ಸುಸೂತ್ರವಾಗಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಮೂಲಕ ಕುಶಾಲನಗರದಲ್ಲಿ ಸಿದ್ಧತೆ ಮಾಡಿ ಸಮಯಕ್ಕೆ ಸರಿಯಾಗಿ ಉತ್ತಮವಾದ ಆಹಾರವನ್ನು ನೀಡಲಾಗುತ್ತಿದೆ.

ಜಿಲ್ಲಾಡಳಿತದ ನಿರ್ದೇಶನದಂತೆ ಸೋಮವಾರಪೇಟೆ ತಾಲೂಕು ತಹಶೀಲ್ದಾರ್ ಗೋವಿಂದರಾಜ್ ಅವರ ಪ್ರಯತ್ನದಲ್ಲಿ ವಿವಿಧ ಇಲಾಖೆಯ ಸಹಯೋಗದೊಂದಿಗೆ ಸೋಂಕಿತ ವ್ಯಕ್ತಿಗಳಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಿದ ಹಿನ್ನೆಲೆಯಲ್ಲಿ ೬,೫೦೦ ಪುರುಷರು ಮತ್ತು ೩,೫೦೦ ಕ್ಕೂ ಹೆಚ್ಚು ಮಹಿಳೆಯರು ಚಿಕಿತ್ಸೆ ಪಡೆದು ಮನೆಗಳಿಗೆ ತೆರಳಿದ್ದಾರೆ.

ಈ ಕೇಂದ್ರದಲ್ಲಿ ಒಬ್ಬರು ವೈದ್ಯರು, ಇಬ್ಬರು ನರ್ಸ್, ಒಬ್ಬರು ಸಹಾಯಕ ನರ್ಸ್ಗಳು, ಇಬ್ಬರು ಡಿ ಗ್ರೂಪ್ ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಕೊರೊನಾ ಸೋಂಕಿತ ವ್ಯಕ್ತಿಗಳಿಗೆ ಕೋವಿಡ್ ಕೇರ್ ಸೆಂಟರ್‌ನಲ್ಲಿ ಮನೋರಂಜನೆಗಾಗಿ ಟಿ.ವಿ. ಅಳವಡಿಸಲಾಗಿದೆ, ಕ್ರೀಡಾ ಸಾಮಗ್ರಿಗಳಾದ ಕೇರಂ, ಚೆಸ್ ಇರಿಸಲಾಗಿದೆ. ಇದೀಗ ಮಕ್ಕಳು ಮತ್ತು ಕೆಲ ಯುವಕರು ಇರುವುದರಿಂದ ಮಳೆಯ ಪ್ರಮಾಣ ಕಡಿಮೆ ಇದುವುದರಿಂದ ಕ್ರಿಕೆಟ್ ಕೂಡ ಆಟವಾಡುತ್ತಿದ್ದಾರೆ. ಇದರ ಜೊತೆಯಲ್ಲಿ ಯೋಗ ಮಾಡಲು ವ್ಯವಸ್ಥೆ ಮಾಡಲಾಗಿದೆ ಈ ಕೇಂದ್ರವು ಸುಸಜ್ಜಿತ ಕಟ್ಟಡವಾಗಿರುವುದರಿಂದ ಸೋಂಕಿತ ವ್ಯಕ್ತಿಗಳಿಗೆ ಬಿಸಿ ನೀರಿನ ಎಲ್ಲಾ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಾಲೂಕು ಕೋವಿಡ್ ಕೇರ್ ಸೆಂಟರ್ ನೋಡಲ್ ಅಧಿಕಾರಿಯಾದ ಮಡಿಕೇರಿಯ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ಅÀವರು ತಿಳಿಸಿದ್ದಾರೆ. ಇವರ ಜೊತೆಯಲ್ಲಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಬಾಲಕೃಷ್ಣ ರೈ, ಆಹಾರ ಸರಬರಾಜು ವ್ಯವಸ್ಥೆ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ. ಆರೋಗ್ಯಕ್ಕೆ ಸಂಬAಧಿಸಿದAತೆ ತಾಲೂಕು ವೈದ್ಯಾಧಿಕಾರಿ ಡಾ. ಶ್ರೀನಿವಾಸ್ ನಿರ್ವಹಣೆ ಮಾಡುತ್ತಿದ್ದಾರೆ.

ಸೋಮವಾರಪೇಟೆ ತಾಲೂಕಿನಲ್ಲಿ ಕೊರೊನಾ ಸೋಂಕಿತ ವ್ಯಕ್ತಿಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂಬುದನ್ನು ಗಮನಿಸಿ ಜಿಲ್ಲಾಡಳಿತದ ಸೂಚನೆಯಂತೆ ಬಸವನ ಹಳ್ಳಿ ಮೊರಾರ್ಜಿ ವಸತಿ ಶಾಲೆಯಲ್ಲಿ ಒಂದು ಕೋವಿಡ್ ಸೆಂಟರ್ ತೆರೆಯಲಾಗಿತ್ತು. ಆದರೆ, ಇದೀಗ ಇದನ್ನು ಮುಚ್ಚಲಾಗಿದೆ. ಆದರೆ ಆಲೂರು ಸಿದ್ದಾಪುರದಲ್ಲಿ ಕೋವಿಡ್ ಕೇರ್ ಸೆಂಟರ್ ಸೋಂಕಿತರಿಗೆ ಚಿಕಿತ್ಸೆಯನ್ನು ಮುಂದುವರಿಸಿದೆ.

ಮೂರನೆಯ ಅಲೆಯ ಹಿನ್ನೆಲೆಯಲ್ಲಿ ಕೂಡಿಗೆ ಕೋವಿಡ್ ಸೆಂಟರ್ ನಲ್ಲಿ ೪೪ ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರುಗಳಿಗೆ ಬೇಕಾಗುವ ಎಲ್ಲಾ ರೀತಿಯ ವ್ಯವಸ್ಥೆಯನ್ನು ಕೋವಿಡ್ ಕೇರ್ ಸೆಂಟರ್‌ನಲ್ಲಿ ಮಾಡಲಾಗಿ ಗುಣಮುಖರಾಗಲು ಬೇಕಾಗುವ ಎಲ್ಲಾ ರೀತಿಯ ಚಿಕಿತ್ಸೆಗಳನ್ನು ಈ ಕೇಂದ್ರದಲ್ಲಿ ನೀಡಲಾಗುತ್ತಿದೆ.

-ಕೆ.ಕೆ. ನಾಗರಾಜಶೆಟ್ಟಿ