ಕುಶಾಲನಗರ, ಆ.೨೭: ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕೊಡಗು ಪ್ರಾದೇಶಿಕ ಕಚೆೆÃರಿ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ವತಿಯಿಂದ ಗೌರಿ ಗಣೇಶೋತ್ಸವಕ್ಕೆ ಪೂರಕವಾಗಿ ಪರಿಸರ ಸ್ನೇಹಿ ಹಸಿರು,ಅರಿಶಿಣ ಗಣೇಶೋತ್ಸವ ಆಚರಣೆ ಅಂಗವಾಗಿ ಇಲ್ಲಿನ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಇಕೋ ಕ್ಲಬ್ ವತಿಯಿಂದ ಪರಿಸರ ಸ್ನೇಹಿ ಹಾಗೂ ಜನಜಾಗೃತಿ ಕುರಿತ ಭಿತ್ತಿಚಿತ್ರವನ್ನು ಬಿಡುಗಡೆ ಮಾಡಲಾಯಿತು.ಅರಿಶಿಣ ಗಣೇಶೋತ್ಸವ ಜಾಗೃತಿ ಕುರಿತು ಮಾಹಿತಿ ನೀಡಿ ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿದ ರಾಷ್ಟಿçÃಯ ಹಸಿರು ಪಡೆಯ ಕೊಡಗು ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ರಾಸಾಯನಿಕ ಹಾಗೂ ಪಿ.ಪಿ.ಓ. ಗಣೇಶ ಮೂರ್ತಿಯ ಪ್ರತಿಷ್ಟಾಪನೆಗೆ ಪರ್ಯಾಯವಾಗಿ ಪರಿಸರ ಸ್ನೇಹಿ ಜೇಡಿಮಣ್ಣಿನಿಂದ ಹಾಗೂ ಅರಿಶಿಣ ಗಣೇಶಮೂರ್ತಿಯನ್ನು ಪ್ರತಿಷ್ಠಾಪಿಸುವ ಮೂಲಕ ಗಣೇಶೋತ್ಸವ ಆಚರಿಸಬೇಕಿದೆ ಎಂದರು. ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಕುರಿತು ಶಾಲೆಗಳ ಇಕೋ ಕ್ಲಬ್ ಮೂಲಕ ವಿದ್ಯಾರ್ಥಿಗಳು, ಯುವ ಸಮುದಾಯ ಹಾಗೂ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಪ್ರೇಮಕುಮಾರ್ ತಿಳಿಸಿದರು.

ಅರಿಶಿಣ ಗಣೇಶೋತ್ಸವ ಕುರಿತು ಶಾಲೆಗಳ ಇಕೋ ಕ್ಲಬ್ ವತಿಯಿಂದ ಜನಜಾಗೃತಿ ಮೂಡಿಸಲಾಗುತ್ತಿದೆ.

ಸರ್ಕಾರಿ ಪಿಯು ಕಾಲೇಜಿನ ಉಪ ಪ್ರಾಂಶುಪಾಲ ವೈ.ಎಸ್.ಪರಮೇಶ್ವರಪ್ಪ, ಗಣೇಶೋತ್ಸವದ ಭಿತ್ತಿಪತ್ರ ಬಿಡುಗಡೆಗೊಳಿಸಿದರು.

ಬಾಲಕಿಯರ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಬಿ.ಎನ್.ಪುಷ್ಪಾ, ಮುಖ್ಯೋಪಾಧ್ಯಾಯರಾದ ಮೂಕಾಂಬಿಕಾ ಶಾಲೆಯ ಎಸ್.ಎಸ್.ಗೋಪಾಲ್, ಶಿರಂಗಾಲ ಶಾಲೆಯ ಸೋಮಯ್ಯ,ಹೆಬ್ಬಾಲೆ ಶಾಲೆಯ ಎಚ್.ಎಸ್.ಗಣೇಶ್, ಸುಂಟಿಕೊಪ್ಪ ಶಾಲೆಯ ಬಾಲಕೃಷ್ಣ, ಬಸವನಹಳ್ಳಿ ಶಾಲೆಯ ಕೆ.ಎಂ. ಅಯ್ಯಚ್ಚು ಇದ್ದರು.