ಕುಶಾಲನಗರ, ಆ. ೨೭: ಮಹಿಳೆಯರ ಮೇಲಿನ ದೌರ್ಜನ್ಯ,ಅತ್ಯಾಚಾರಗಳು ಸೇರಿದಂತೆ ದಿನಬಳಕೆ ವಸ್ತುಗಳು,ಇಂಧನ ಬೆಲೆ ಏರಿಕೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅಖಿಲ ಭಾರತ ಕ್ರಾಂತಿಕಾರಿ ಮಹಿಳಾ ಸಂಘಟನೆ ಕಾರ್ಯಕರ್ತರು ಕುಶಾಲನಗರದ ತಹಶೀಲ್ದಾರರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ಜನಸಾಮಾನ್ಯರ ಮೇಲೆ ಆಗುತ್ತಿರುವ ಅನ್ಯಾಯದ ಬಗ್ಗೆ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಅಖಿಲ ಭಾರತ ಕ್ರಾಂತಿಕಾರಿ ಮಹಿಳಾ ಸಂಘಟನೆ ಜಿಲ್ಲಾಧ್ಯಕ್ಷೆ ಪವಿತ್ರ, ಉಪಾಧ್ಯಕ್ಷೆ ಅನಿತಾ, ಕಾರ್ಯದರ್ಶಿ ರಾಧ, ಗೌರವಾಧ್ಯಕ್ಷೆ ವನಜಾಕ್ಷಿ, ಜಿಲ್ಲಾ ಸಮಿತಿ ಸದಸ್ಯೆ ಸಾವಿತ್ರಿ ರಾಜ್ಯ ರೈತ ಸಂಘ ಕಾರ್ಯದರ್ಶಿ ನಿರ್ವಾಣಪ್ಪ, ಸಿಪಿಐಎಂಎA ಮುಖಂಡರಾದ ಮಂಜುನಾಥ್, ಸಣ್ಣಪ್ಪ, ಪ್ರಕಾಶ್ ಇದ್ದರು.