ಕೊಲ್ಲಂ ಕರಾವಳಿಯಲ್ಲಿ ದೋಣಿ ಮುಳುಗಿ ನಾಲ್ವರು ಮೀನುಗಾರರು ಸಾವು

ಕೊಲ್ಲಂ, ಸೆ. ೨: ಕೊಲ್ಲಂ ಕರಾವಳಿಯ ಅಝಿಕಲ್ ಬಳಿ ಗುರುವಾರ ಮುಂಜಾನೆ ಮೀನುಗಾರಿಕಾ ದೋಣಿ ಮುಳುಗಿ ನಾಲ್ವರು ಮೀನುಗಾರರು ಸಾವನ್ನಪ್ಪಿದ್ದಾರೆ. ದೋಣಿಯಲ್ಲಿದ್ದ ಇತರ ೧೨ ಜನರನ್ನು ರಕ್ಷಿಸಲಾಗಿದೆ. ಮೃತಪಟ್ಟವರನ್ನು ಕಾಯಂಕುಳA ನಿವಾಸಿಗಳಾದ ಸುದೇವನ್ (೫೧), ಸುನಿಲ್‌ದತ್ (೨೪), ಓಚಿರಾ ನಿವಾಸಿಗಳಾದ ಶ್ರೀಕುಮಾರ್ (೪೫) ಮತ್ತು ನೆಡಿಯತ್‌ನ ತಂಕಪ್ಪನ್ (೬೦) ಎಂದು ಗುರುತಿಸಲಾಗಿದೆ. ಕರಾವಳಿ ಪೊಲೀಸರ ಪ್ರಕಾರ, ಇಂದು ಬೆಳಿಗ್ಗೆ ೫.೩೦ ರ ಸುಮಾರಿಗೆ ಮೀನುಗಾರಿಕೆಗೆ ಅಲಪುಳಾದ ವಲಿಯಾ ಅಝಿಕಲ್ ಕರಾವಳಿಯಿಂದ ಹೊರಟ ‘ಓಮಕರಂ' ಹೆಸರಿನ ದೋಣಿಯಲ್ಲಿ ೧೬ ಮೀನುಗಾರರಿದ್ದರು. ಅಝಿಕಲ್ ಬಂದರಿನಿAದ ಐದು ನಾಟಿಕಲ್ ಮೈಲಿ ದೂರದಲ್ಲಿ ಈ ಘಟನೆ ನಡೆದಿದೆ. ಮೀನುಗಾರರು ಮೀನುಗಾರಿಕೆ ಮುಗಿಸಿ ವಾಪಸ್ ಬರುತ್ತಿದ್ದಾಗ ದೋಣಿ ಅಪಘಾತಕ್ಕೀಡಾಗಿದೆ.

ಸಾರ್ವಜನಿಕ ಸ್ವತ್ತುಗಳ ಖಾಸಗೀಕರಣ ಒಳ್ಳೆಯದಲ್ಲ: ಸ್ಟಾಲಿನ್

ಚೆನ್ನೆöÊ, ಸೆ. ೨: ರಾಷ್ಟಿçÃಯ ನಗದೀಕರಣ ಯೋಜನೆಯ ಮೂಲಕ ಸಾರ್ವಜನಿಕ ವಲಯದ ಸಂಸ್ಥೆಗಳನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ಪ್ರವೃತ್ತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಇಂತಹ ಕ್ರಮಗಳಿಗೆ ರಾಜ್ಯದ ವಿರೋಧ ವನ್ನು ಶೀಘ್ರವೇ ಪ್ರಧಾನಿ ನರೇಂದ್ರ ಮೋದಿಯವರಿಗೆ ತಿಳಿಸುವುದಾಗಿ ಹೇಳಿದ್ದಾರೆ. ರಾಜ್ಯ ವಿಧಾನಸಭೆಯಲ್ಲಿ ನಡೆದ ವಿಶೇಷ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಸ್ಟಾಲಿನ್, ಸಾರ್ವಜನಿಕ ವಲಯದ ಸಂಸ್ಥೆಗಳು ಈ ದೇಶದ ಜನರ ಸ್ವತ್ತುಗಳಾಗಿವೆ. ಅವುಗಳು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಮೂಲಭೂತವಾಗಿ ಕಾರ್ಯನಿರ್ವಹಿಸುತ್ತವೆ. ಜನರ ಸೇವೆಗಾಗಿ ಕಾರ್ಯನಿರ್ವಹಿಸುತ್ತಿರುವ ಸಾರ್ವಜನಿಕ ವಲಯದ ಸಂಸ್ಥೆಗಳ ಖಾಸಗೀಕರಣಗೊಳಿಸುವುದು ಅಥವಾ ಗುತ್ತಿಗೆ ನೀಡುವುದು ದೇಶದ ಹಿತಕ್ಕೆ ಮಾರಕ. ಖಾಸಗೀಕರಣಕ್ಕೆ ರಾಜ್ಯ ಸರ್ಕಾರದ ವಿರೋಧವನ್ನು ನಾನು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರದ ಮೂಲಕ ತಿಳಿಸುತ್ತೇನೆ ಎಂದು ಹೇಳಿದ್ದಾರೆ.