ಮಡಿಕೇರಿ, ಸೆ.೨: ಜಿಲ್ಲೆಯಲ್ಲಿ ಕೋವಿಡ್-೧೯ ಪಾಸಿಟಿವಿಟಿ ಪ್ರಮಾಣವು ಶೇ.೨ ಕ್ಕಿಂತ ಕಡಿಮೆಯಾಗುತ್ತಿಲ್ಲ. ಆದ್ದರಿಂದ ಜಿಲ್ಲೆಯ ಗಡಿಭಾಗದ ಚೆಕ್‌ಪೋಸ್ಟ್ ಗಳಲ್ಲಿ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳುವುದರ ಜೊತೆಗೆ, ಕೇರಳ ರಾಜ್ಯದ ಗಡಿ ಭಾಗಕ್ಕೆ ಹೊಂದಿಕೊAಡಿರುವ ೨೦ ಕಿ.ಮೀ. ವ್ಯಾಪ್ತಿಯ ಎಲ್ಲಾ ಗ್ರಾಮಗಳ ೧೮ ವರ್ಷ ಮೇಲ್ಪಟ್ಟವರಿಗೆ ಕೋವಿಡ್ ನಿರೋಧಕ ಲಸಿಕೆ ನೀಡುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-೧೯ ನಿಯಂತ್ರಣ ಸಂಬAಧಿಸಿದAತೆ ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಕುಟ್ಟ, ಕರಿಕೆ ಭಾಗಗಳಲ್ಲಿ ಕೋವಿಡ್ ನಿರೋಧಕ ಲಸಿಕೆ ಪಡೆಯಲು ಮುಂದೆ ಬರುತ್ತಿಲ್ಲ ಎಂಬ ಮಾಹಿತಿ ಇದ್ದು, ಅಲ್ಲಿನ ಜನರಿಗೆ ಕೋವಿಡ್ ನಿರೋಧಕ ಲಸಿಕೆಯ ಮಹತ್ವದ ಬಗ್ಗೆ ಮಾಹಿತಿ ನೀಡಿ ೧೫ ದಿನಗಳ ಗಡಿಭಾಗದ ೧೮ ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವಂತೆ ಸೂಚಿಸಿದರು.

ಜಿಲ್ಲೆಯ ಎಲ್ಲ್ಲೆಲ್ಲಿ ಹೋಂ ಐಸೋಲೇಷನ್‌ನಲ್ಲಿ ಇದ್ದಾರೆ ಎಂಬ ಬಗ್ಗೆ ಮಾಹಿತಿ ಪಡೆಯುವಂತಾಗಲು ಸ್ಥಳೀಯ ಗ್ರಾ.ಪಂ.ಗೆ ಮಾಹಿತಿ ನೀಡಬೇಕು. ಹೋಂ ಐಸೋಲೇಷನ್‌ನಲ್ಲಿ ಇರುವವರ ಚಲನವಲನ ಬಗ್ಗೆ ನಿಗಾವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ತಾಲೂಕು ಮಟ್ಟದಲ್ಲಿ ತಹಶೀಲ್ದಾರರು, ತಾ.ಪಂ.ಇಒಗಳು, ತಾಲೂಕು ವೈದ್ಯಾಧಿಕಾರಿಗಳು ಹಾಗೂ ಡಿವೈಎಸ್‌ಪಿಗಳು,

(ಮೊದಲ ಪುಟದಿಂದ) ಸಭೆ ನಡೆಸಿ ಕೋವಿಡ್ ನಿಯಂತ್ರಣಕ್ಕೆ ಕ್ರಮವಹಿಸಬೇಕು. ತಾಲೂಕು ಮಟ್ಟದ ಅಧಿಕಾರಿಗಳು ಚೆಕ್‌ಪೋಸ್ಟ್ಗೆ ಆಗಾಗ ಭೇಟಿ ನೀಡಿ ಪರಿಶೀಲಿಸುವಂತೆ ಸೂಚಿಸಿದರು.

ಗ್ರಾಮ ಲೆಕ್ಕಿಗರು, ಪಿಡಿಒಗಳು ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿಬ್ಬಂದಿಗಳು ಹೋಂ ಕ್ವಾರಂಟೈನ್ ಇರುವವರ ಬಗ್ಗೆ ಗಮನಹರಿಸಬೇಕು. ಗ್ರಾ.ಪಂ.ಮಟ್ಟದಲ್ಲಿ ಕಾರ್ಯಪಡೆ ಸಮಿತಿ ಇದ್ದು, ಸಮಿತಿಯು ನೆರೆ ರಾಜ್ಯದಿಂದ ಬರುವವರ ಬಗ್ಗೆ ಹೆಚ್ಚಿನ ನಿಗಾವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಕುಟ್ಟ, ಮಾಕುಟ್ಟ, ಕರಿಕೆ, ಸಂಪಾಜೆ ಚೆಕ್‌ಪೋಸ್ಟ್ ಮೂಲಕ ಜಿಲ್ಲೆಗೆ ಆಗಮಿಸುವವರ ನಿಖರ ಮಾಹಿತಿ ಪಡೆಯುವುದರ ಜೊತೆಗೆ ಎಲ್ಲಿಗೆ ತೆರಳುತ್ತಿದ್ದಾರೆ ಎಂಬ ಬಗ್ಗೆ ಮಾಹಿತಿ ಇರಬೇಕು ಎಂದರು.

ಜಿಲ್ಲೆಯಲ್ಲಿ ಕೋವಿಡ್-೧೯ ಪಾಸಿಟಿವಿಟಿ ಪ್ರಮಾಣವು ಶೇ.೨ ಕ್ಕಿಂತ ಕಡಿಮೆಯಾದಲ್ಲಿ ಶಾಲೆಗಳನ್ನು ಆರಂಭಿಸಬೇಕಾಗುತ್ತದೆ. ಆದ್ದರಿಂದ ಕೋವಿಡ್ ಆರೈಕೆ ಕೇಂದ್ರಗಳನ್ನು ಸ್ಥಳಾಂತರಿಸಬೇಕಿದೆ. ಆ ನಿಟ್ಟಿನಲ್ಲಿ ನವೋದಯ ಶಾಲೆ ಸೇರಿದಂತೆ ವಿವಿಧ ಕಡೆಗಳ ಕೋವಿಡ್ ಕೇರ್ ಸೆಂಟರ್ ತೆರೆದಿರುವ ಕಡೆ ಬಿಟ್ಟುಕೊಡಬೇಕಿದೆ. ಆ ನಿಟ್ಟಿನಲ್ಲಿ ಈಗಿನಿಂದಲೇ ತಯಾರಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.

ಡಾ.ಕೆ.ಮೋಹನ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಸರ್ಕಾರಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೇರಳ ರಾಜ್ಯದಿಂದ ಆಗಮಿಸುವವರನ್ನು ಕಡ್ಡಾಯವಾಗಿ ಹೋಂ ಐಸೋಲೇಷನ್ ಮಾಡಲಾಗುತ್ತಿದೆ. ಆದರೆ ಸಾಮಾನ್ಯ ಜನರು ಎಲ್ಲಿಗೆ ಹೋಗುತ್ತಿದ್ದಾರೆ ಎಂಬುದೇ ಗೊತ್ತಾಗುತ್ತಿಲ್ಲ. ಈ ಬಗ್ಗೆ ನಿಖರ ಮಾಹಿತಿ ಪಡೆಯಬೇಕು ಎಂದರು. ಸಮುದಾಯ ಆರೋಗ್ಯ ಅಧಿಕಾರಿ ಡಾ.ಮಹೇಶ್ ಅವರು ಕೋವಿಡ್ ನಿಯಂತ್ರಣ ಹಾಗೂ ಅಂಕಿ ಅಂಶಗಳ ಬಗ್ಗೆ ಪಾಸಿಟಿವಿಟಿ ಪ್ರಮಾಣ ಸಂಬAಧಿಸಿದAತೆ ಹಲವು ಮಾಹಿತಿ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು, ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ನೂತನ ಡಿಎಚ್‌ಒ ಡಾ.ವೆಂಕಟೇಶ್, ತಹಶೀಲ್ದಾರರಾದ ಮಹೇಶ್, ಗೋವಿಂದರಾಜು, ಯೋಗಾನಂದ, ತಾಲೂಕು ವೈದ್ಯಾಧಿಕಾರಿಗಳು ಇತರರು ಇದ್ದರು.