ಮಡಿಕೇರಿ, ಸೆ. ೨: ಕಳೆದ ಎರಡೂವರೆ ವರ್ಷಗಳಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಕೆ. ಮೋಹನ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಜಿಲ್ಲಾಡಳಿತದಿಂದ ಬೀಳ್ಕೊಡ ಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅವರನ್ನು ಸನ್ಮಾನಿಸಲಾಯಿತು.

ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಮಾತನಾಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ. ಕೆ. ಮೋಹನ್ ಅವರು ಇಲಾಖೆಯಲ್ಲಿ ಯಾವುದೇ ದೂರು ಬರದಂತೆ ಕರ್ತವ್ಯ ನಿರ್ವಹಿಸಿದ್ದಾರೆ. ಎಲ್ಲಾ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗಳೊAದಿಗೆ ಉತ್ತಮ ಬಾಂಧವ್ಯದಿAದ ಕೆಲಸ ನಿರ್ವಹಿ ಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜಿ.ಪಂ. ಸಿಇಒ ಭನ್ವರ್ ಸಿಂಗ್ ಮೀನಾ ಅವರು ಡಾ. ಕೆ. ಮೋಹನ್ ಅವರು ಕಳೆದ ಎರಡೂವರೆ ವರ್ಷದಲ್ಲಿ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ವೃತ್ತಿಯಲ್ಲಿ ಶ್ರದ್ಧೆ ಹೊಂದಿದ್ದರು. ಕೋವಿಡ್ ನಂತಹ ಒತ್ತಡದ ಸಂದರ್ಭ ದಲ್ಲಿಯೂ ಸಹ ಉತ್ತಮ ಕಾರ್ಯ ನಿರ್ವಹಿಸಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಕೆಲಸದಲ್ಲಿ ಸಾಕಷ್ಟು ಬದಲಾವಣೆ ತಂದಿದ್ದಾರೆ ಎಂದರು.

ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು ಅವರು ಮಾತನಾಡಿ, ಡಾ. ಕೆ. ಮೋಹನ್ ಅವರು ವೈದ್ಯಕೀಯ ಕ್ಷೇತ್ರದಲ್ಲಿ ಅಪಾರ ಜ್ಞಾನ ಹೊಂದಿದ್ದು, ಕೋವಿಡ್ ನಿಯಂತ್ರಣ ಸಂಬAಧ ಸಾರ್ವಜನಿಕರಿಗೆ ಉತ್ತಮ ಮಾಹಿತಿ ನೀಡುತ್ತಿದ್ದರು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಮಾತನಾಡಿ, ಕೋವಿಡ್ ಸಾರ್ವತ್ರಿಕ ವಿಪತ್ತಿನ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ನಾಯಕತ್ವ ಗುಣದಿಂದ ಕರ್ತವ್ಯ ನಿರ್ವಹಿಸಿದ್ದಾರೆ ಎಂದರು.

ವಾರ್ತಾಧಿಕಾರಿ ಚಿನ್ನಸ್ವಾಮಿ ಅವರು ಮಾತನಾಡಿ, ಯಾವುದೇ ಸಂದರ್ಭದಲ್ಲಿ ಸುದ್ದಿ ವಿಚಾರಕ್ಕೆ ಸಂಬAಧಿಸಿದAತೆ ಸಂಶಯಗಳಿದ್ದಾಗ ಕರೆ ಮಾಡಿದ ಸಂದರ್ಭದಲ್ಲಿ ತಕ್ಷಣವೇ ಮಾಹಿತಿ ನೀಡುತ್ತಿದರು. ಎಂತಹ ಒತ್ತಡದ ಸಂದರ್ಭದಲ್ಲಿಯೂ ಕರೆಯನ್ನು ಸ್ವೀಕರಿಸುತ್ತಿದ್ದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ಕೆ. ಮೋಹನ್ ಅವರು, ಕೊಡಗು ಜಿಲ್ಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಉತ್ತಮವಾಗಿ ಸೇವೆ ಸಲ್ಲಿಸಲು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಹಕಾರದಿಂದ ಸಾಧ್ಯವಾಯಿತು.

ಹಾಗೆಯೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಎನ್‌ಎಂ, ಆಶಾ ಕಾರ್ಯಕರ್ತರು, ಎಲ್ಲಾ ಹಂತದ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು, ತಾಲೂಕು ವೈದ್ಯಾಧಿಕಾರಿಗಳು ಹೀಗೆ ಎಲ್ಲರ ಸಹಕಾರದಿಂದ ಕೊಡಗು ಜಿಲ್ಲೆಯಲ್ಲಿ ಎರಡೂವರೆ ವರ್ಷಗಳ ಕಾಲ ಕಾರ್ಯನಿರ್ವಹಿಸಲು ಸಾಧ್ಯ ವಾಯಿತು ಎಂದು ತಿಳಿಸಿದರು.

ತಾಲೂಕು ವೈದ್ಯಾಧಿಕಾರಿ ಡಾ. ಮಂಜುನಾಥ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಲೆಕ್ಕಾಧಿಕಾರಿ ರಾಜೇಶ್ವರಿ, ದಿವಾಕರ, ಯಶೋಧ, ದೇವರಾಜು, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಆನಂದ್, ಸಮುದಾಯ ಆರೋಗ್ಯಾಧಿಕಾರಿ ಡಾ. ಮಹೇಶ್ ಇದ್ದರು.