ಕೂಡಿಗೆ, ಸೆ. ೨: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡತ್ತೂರು ಗ್ರಾಮ ಸಮೀಪದ ಬೆಂಡೆಬೆಟ್ಟ ಗ್ರಾಮದ ಗಿರಿಜನ ಹಾಡಿಗೆ ಜಿಲ್ಲಾ ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡೂ ಭೇಟಿ ನೀಡಿ ಹಾಡಿ ನಿವಾಸಿಗಳಿಗೆ ಹಕ್ಕು ಪತ್ರ ನೀಡುವ ಬಗ್ಗೆ ಪರಿಶೀಲನೆ ನಡೆಸಿದರು. ಹಾಡಿಯಲ್ಲಿ ೨೩ ಕುಟುಂಬಗಳಿದ್ದು, ಈಗಾಗಲೇ ೧೦ ಕುಟುಂಬದವರಿಗೆ ಹಕ್ಕುಪತ್ರವನ್ನು ನೀಡಲಾಗಿದೆ. ಉಳಿದ ೧೩ ಕುಟುಂಬದವರಿಗೆ ಹಕ್ಕುಪತ್ರವನ್ನು ನೀಡುವ ಬಗ್ಗೆ ಪರಿಶೀಲಿಸಿದರು.

ಈ ಸಂದರ್ಭ ಕುಶಾಲನಗರ ವಲಯ ಅರಣ್ಯಾಧಿಕಾರಿ ಅನನ್ಯಕುಮಾರ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್, ಕುಶಾಲನಗರ ಕಂದಾಯ ಇಲಾಖೆಯ ಉಪ ತಹಶೀಲ್ದಾರ್ ಮಧುಸೂದನ್, ಕಂದಾಯ ನಿರೀಕ್ಷಕ ಸಂತೋಷ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ, ಸದಸ್ಯರುಗಳಾದ ಹಾರಂಗಿಯ ಮಣಿ, ದಿನೇಶ್, ಗಿರೀಶ್, ಈರಯ್ಯ ಗ್ರಾಮ ಲೆಕ್ಕಾಧಿಕಾರಿ ಗುರುದರ್ಶನ್ ಸೇರಿದಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಹಾಡಿಯ ಜನರು ಹಾಜರಿದ್ದರು.