ಮಡಿಕೇರಿ, ಸೆ. ೪ : ಕೋವಿಡ್ ೧೯ ನಿಯಂತ್ರಣ ಸಂಬAಧ ಗಡಿ ಭಾಗದ ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದರು.
ಶನಿವಾರ ವೀಡಿಯೋ ಸಂವಾದ ಮೂಲಕ ಮಾಹಿತಿ ಪಡೆದು ಅವರು ಮಾತನಾಡಿ ವಾರಾಂತ್ಯದ ಕರ್ಫ್ಯೂ ಸಡಿಲಿಕೆ ಮಾಡುವಲ್ಲಿ ಹೆಚ್ಚು ಹೆಚ್ಚು ಕೋವಿಡ್ ಪರೀಕ್ಷೆ ಮಾಡುವಂತಾಗಬೇಕು ಹಾಗೆಯೇ ಲಸಿಕೆಯನ್ನು ನೀಡುವ ಪ್ರಮಾಣವನ್ನು ಹೆಚ್ಚಿಸಬೇಕೆಂದರು.
ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಮಾತನಾಡಿ, ೨೯ ಗ್ರಾಮಗಳಲ್ಲಿ ೫ ಕ್ಕಿಂತ ಹೆಚ್ಚು ಪ್ರಕರಣಗಳಿದ್ದು, ೪ ಗ್ರಾಮಗಳಲ್ಲಿ ೧೦ ಕ್ಕಿಂತ ಹೆಚ್ಚು ಹಾಗೂ ೨ ಗ್ರಾಮಗಳಲ್ಲಿ ೨೦ ಕ್ಕಿಂತ ಹೆಚ್ಚು ಪ್ರಕರಣಗಳು ಕಂಡುಬAದಿದೆ ಎಂದು ವಿವರಿಸಿದರು.
ಜಿಲ್ಲೆಯಲ್ಲಿ ೧೮ ವರ್ಷ ಮೇಲ್ಪಟ್ಟವರಿಗೆ ಲಸಿಕೆಯನ್ನು ನೀಡಲಾಗುತ್ತಿದ್ದು, ಶೇ.೮೧.೩ ರಷ್ಟು ಲಸಿಕಾ ಗುರಿ ಪೂರ್ಣಗೊಳಿಸಲಾಗಿದೆ. ೨೨ ಗಡಿ ಭಾಗಗಳನ್ನು ಗುರುತಿಸಿ ೨೩ ಸಾವಿರ ಲಸಿಕಾ ಗುರಿಯನ್ನು ಹೊಂದಿದ್ದು, ಶೇ.೮೨ ರಷ್ಟು ಪೂರ್ಣಗೊಳಿಸಲಾಗಿದೆ ಎಂದರು.
ಗಡಿ ಭಾಗದಿಂದ ೨೦ ಕಿ.ಮೀ.ನಲ್ಲಿ ಇರುವ ಗ್ರಾಮಗಳಿಗೆ ಶೇ.೧೦೦ ಲಸಿಕೆ ನೀಡಿ ಗುರಿ ಸಾಧಿಸುವ ನಿಟ್ಟಿನಲ್ಲಿ ಹೆಚ್ಚಿನ ಗಮನಹರಿಸಲಾಗಿದೆ ೧೨ ಗ್ರಾಮಗಳಲ್ಲಿ ಪ್ರಕರಣಗಳು ಹೆಚ್ಚುತ್ತಿದ್ದು, ಆ ಗ್ರಾಮಗಳನ್ನು ಹಾಟ್‌ಸ್ಪಾಟ್ ಎಂದು ಪರಿಗಣಿಸಿ ಪೂರ್ಣ ಪ್ರಮಾಣದ ಲಸಿಕೆಯನ್ನು ನೀಡಲು ಗುರಿ ಹೊಂದಲಾಗಿದೆ ಎಂದು ಹೇಳಿದರು.
ಸಂವಾದದಲ್ಲಿ ಜಿ.ಪಂ. ಸಿಇಓ ಭಂವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು, ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ವೆಂಕಟೇಶ್, ವೈದ್ಯಕೀಯ ಕಾಲೇಜಿನ ನಿರ್ದೇಶಕÀ ಡಾ.ಕಾರ್ಯಪ್ಪ, ಮಡಿಕೇರಿ ತಹಶೀಲ್ದಾರ್ ಮಹೇಶ್, ಡಾ.ಆನಂದ್, ಡಾ.ಗೋಪಿನಾಥ್ ಇತರರು ಇದ್ದರು.