ಸೋಮವಾರಪೇಟೆ, ಸೆ. ೪: ಮಕ್ಕಳಿಗೆ ಪ್ರಾಥಮಿಕ ಶಾಲಾ ಶಿಕ್ಷಣದ ಹಂತದಲ್ಲಿಯೇ ದೈಹಿಕ ಶಿಕ್ಷಕರಿಂದ ಶಿಕ್ಷಣ ದೊರೆತರೆ ಒಲಂಪಿಕ್ಸ್ನಲ್ಲಿ ಭಾರತ ಉತ್ತಮ ಸಾಧನೆ ತೋರಬಹುದು; ಇದರೊಂದಿಗೆ ಸಾಧಕ ಕ್ರೀಡಾಪಟುಗಳಿಗೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಕೃಪಾಂಕ ನೀಡುವ ವ್ಯವಸ್ಥೆಯೂ ಆಗಬೇಕು ಎಂದು ರಾಜ್ಯ ಪ್ರಶಸ್ತಿ ವಿಜೇತ ಕೊಡಗಿನ ದೈಹಿಕ ಶಿಕ್ಷಣ ಶಿಕ್ಷಕ ಡಾ. ಸದಾಶಿವಯ್ಯ ಎಸ್. ಪಲ್ಲೇದ್ ಅಭಿಮತ ವ್ಯಕ್ತಪಡಿಸಿದರು.

‘ಶಕ್ತಿ’ಯೊಂದಿಗೆ ಮಾತನಾಡಿ, ತಮಗೆ ರಾಜ್ಯಮಟ್ಟದ ಪ್ರಶಸ್ತಿ ಲಭಿಸಿರುವುದಕ್ಕೆ ಸಂತಸ ಹಂಚಿಕೊAಡ ಅವರು, ದೈಹಿಕ ಶಿಕ್ಷಣ ಕ್ಷೇತ್ರದಲ್ಲಿ ಆಗಬೇಕಿರುವ ಸುಧಾರಣೆಗಳ ಬಗ್ಗೆಯೂ ಮಾತನಾಡಿದರು.

ಮಕ್ಕಳಿಗೆ ಪ್ರಾಥಮಿಕ ಶಾಲಾ ಹಂತದಲ್ಲಿಯೇ ದೈಹಿಕ ಶಿಕ್ಷಕರಿಂದ ಅಗತ್ಯ ಮಾರ್ಗದರ್ಶನ ದೊರೆತರೆ ಅವರುಗಳು ಭವಿಷ್ಯದಲ್ಲಿ ಉತ್ತಮ ಸಾಧನೆ ತೋರುತ್ತಾರೆ. ಇದರೊಂದಿಗೆ ಒಲಂಪಿಕ್ಸ್ನಲ್ಲಿಯೂ ಪದಕಗಳನ್ನು ಬೇಟೆಯಾಡು ತ್ತಾರೆ. ಅಂತಹ ಶಿಕ್ಷಣ ಪ್ರಾಥಮಿಕ ಹಂತದಿAದಲೇ ನೀಡಬೇಕು ಎಂದರು.

ತಾಲೂಕಿನಲ್ಲಿ ೧೫೦ಕ್ಕೂ ಅಧಿಕ ಪ್ರಾಥಮಿಕ ಶಾಲೆಗಳಿದ್ದು, ಇದರಲ್ಲಿ ಕೇವಲ ೨೮ ದೈಹಿಕ ಶಿಕ್ಷಣ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರತಿ ಶಾಲೆಯಲ್ಲೂ ಕನಿಷ್ಟ ಓರ್ವರಾದರೂ ಶಿಕ್ಷಕರು ಬೇಕು. ದೈಹಿಕ ಶಿಕ್ಷಣ ಶಿಕ್ಷಕರನ್ನು ಪ್ರತಿ ಶಾಲೆಗೂ ನೇಮಕಾತಿ ಮಾಡಿಕೊಳ್ಳಬೇಕು ಎಂದ ಸದಾಶಿವಯ್ಯ ಪಲ್ಲೇದ್, ಕ್ರೀಡಾಕ್ಷೇತ್ರದಲ್ಲಿ ರಾಜ್ಯ, ರಾಷ್ಟç, ಅಂರ‍್ರಾಷ್ಟಿçÃಯ ಮಟ್ಟದಲ್ಲಿ ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಕೃಪಾಂಕ ನೀಡುವ ವ್ಯವಸ್ಥೆ ಜಾರಿಗೆ ಬರಬೇಕು. ಇಲ್ಲದಿದ್ದರೆ ಉತ್ತಮ ಕ್ರೀಡಾಪಟುಗಳು ಬೋರ್ಡ್ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದರೆ ಅವರ ಶೈಕ್ಷಣಿಕ ಹಾಗೂ ಕ್ರೀಡಾ ಭವಿಷ್ಯವೂ ಮಂಕಾಗುತ್ತದೆ ಎಂದು ಅಭಿಪ್ರಾಯಿಸಿದರು.

ಕ್ರೀಡಾಪಟುಗಳಿಗೆ ಕೃಪಾಂಕ ನೀಡುವ ಮೂಲಕ ಅವರುಗಳಿಗೆ ಬದುಕು ಹಾಗೂ ಉದ್ಯೋಗದ ಭದ್ರತೆಯನ್ನು ನೀಡುವಂತಾಗಬೇಕು. ಹೊಸ ರಾಷ್ಟಿçÃಯ ಶಿಕ್ಷಣ ನೀತಿಯಲ್ಲಿ ಇವುಗಳ ಅನುಷ್ಠಾನವಾಗ ಬೇಕು. ಹಾಗಾದಾಗ ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆಗಳನ್ನು ನಿರೀಕ್ಷಿಸಬಹುದು ಎಂದು ಪಲ್ಲೇದ್ ಅಭಿಮತ ವ್ಯಕ್ತಪಡಿಸಿದರು. ವೃತ್ತಿಯಲ್ಲಿನ ಪ್ರಾಮಾಣಿಕತೆ, ನಿಷ್ಠೆ, ಶ್ರಮವನ್ನು ಸಮಾಜ ಮತ್ತು ಇಲಾಖೆ ಗುರುತಿಸುತ್ತದೆ ಎಂಬುದಕ್ಕೆ ತಾನೊಬ್ಬ ಉದಾಹರಣೆ. ಇದರಿಂದಾಗಿ ಆತ್ಮಸ್ಥೆöÊರ್ಯ ವೃದ್ಧಿಯಾಗಿದ್ದು, ವೃತ್ತಿಯಲ್ಲಿ ಇನ್ನೂ ಹೆಚ್ಚಿನ ಪಕ್ವತೆ ಹೊಂದಲು ಪ್ರೇರಣೆಯಾಗಿದೆ ಎಂದರು.

ಮೂಲತಃ ಬಾಗಲಕೋಟೆ ಜಿಲ್ಲೆಯ ಆಲಮಟ್ಟಿ ಜಲಾಶಯ ಯೋಜನಾ ನಿರಾಶ್ರಿತರಾಗಿರುವ ಹೊದ್ಲೂರು ಗ್ರಾಮದವರಾದ ಸದಾಶಿವಯ್ಯ ಅವರು, ೨೦೦೨ರಲ್ಲಿ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಹಂಡ್ಲಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ದೈಹಿಕ ಶಿಕ್ಷಣ ಶಿಕ್ಷಕರಾಗಿ ನೇಮಕಗೊಂಡರು. ಇದಕ್ಕೂ ಮುನ್ನ ಗದಗ ಜಿಲ್ಲೆಯ ಲಕ್ಷೆö್ಮÃಶ್ವರ ಮಲ್ಲಕಂಬ ದೈಹಿಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಾಂಶುಪಾಲರಾಗಿದ್ದರು.

೨೦೦೪ ರಿಂದ ೨೦೦೭ರವರೆಗೆ ಕೂಡಿಗೆಯ ಡಯಟ್‌ನಲ್ಲಿ ಸೇವೆ ಸಲ್ಲಿಸಿದ್ದು, ನಂತರ ಕುಶಾಲನಗರದ ಜೂನಿಯರ್ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ನಿಯೋಜನೆಗೊಂಡರು. ಪ್ರಸ್ತುತ ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ತಾಲೂಕು ದೈಹಿಕ ಶಿಕ್ಷಣ ಅಧಿಕಾರಿಯಾಗಿ ಕಳೆದ ಒಂದೂವರೆ ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಇವರಿಂದ ತರಬೇತಿ ಪಡೆದ ಹಲವಷ್ಟು ವಿದ್ಯಾರ್ಥಿಗಳು ಈಗಾಗಲೇ ಹಾಕಿ, ಅಥ್ಲೆಟಿಕ್ಸ್, ಫುಟ್ಬಾಲ್, ಕಬಡ್ಡಿ ಕ್ರೀಡೆಗಳಲ್ಲಿ ರಾಜ್ಯ ಮತ್ತು ರಾಷ್ಟಿçÃಯ ಮಟ್ಟದಲ್ಲಿ ಭಾಗವಹಿಸಿ ಸಾಧನೆ ತೋರಿದ್ದಾರೆ. ದೈಹಿಕ ಶಿಕ್ಷಣ ವಿಷಯದಲ್ಲಿ ಡಾಕ್ಟರೇಟ್ ಪದವಿ ಪಡೆದಿರುವ ಇವರು, ಈವರೆಗೆ ದೈಹಿಕ ಶಿಕ್ಷಣ ಮತ್ತು ಯೋಗಕ್ಕೆ ಸಂಬAಧಿಸಿದAತೆ ೨೩ ಪುಸ್ತಕಗಳನ್ನು ರಚಿಸಿದ್ದಾರೆ. ಇದರೊಂದಿಗೆ ಕನ್ನಡ ಸಾಹಿತ್ಯ ಪರಿಷತ್, ವಿದ್ಯಾ ಪರಿಷತ್, ಜೇಸೀ ಸಂಸ್ಥೆ, ರೆಡ್‌ಕ್ರಾಸ್‌ಗಳಲ್ಲೂ ಸಕ್ರಿಯರಾಗಿದ್ದಾರೆ.

ಸ್ಟುಡೆಂಟ್ ಪೊಲೀಸ್ ಕೆಡೆಟ್‌ನಲ್ಲೂ ಕಮ್ಯೂನಿಟಿ ಪೊಲೀಸ್ ಆಫೀಸರ್ ಆಗಿರುವ ಸದಾಶಿವಯ್ಯ ಪಲ್ಲೇದ್ ಅವರು, ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾರೆ. ಎನ್‌ಎಸ್‌ಎಸ್‌ನಲ್ಲಿ ಕಾರ್ಯಕ್ರಮ ಅಧಿಕಾರಿಯಾಗಿ ಸಕ್ರಿಯರಾಗಿದ್ದು, ಸ್ಟುಡೆಂಟ್ ಪೊಲೀಸ್ ಕೆಡೆಟ್‌ನಲ್ಲಿನ ಗಮನಾರ್ಹ ಸಾಧನೆಗಾಗಿ ಇವರು ಸೇವೆ ಸಲ್ಲಿಸುತ್ತಿರುವ ಕುಶಾಲನಗರ ಸರ್ಕಾರಿ ಪ್ರೌಢಶಾಲೆಗೆ ರಾಜ್ಯಮಟ್ಟದ ೨ನೇ ಉತ್ತಮ ಎಸ್‌ಪಿಸಿ ಘಟಕ ಪ್ರಶಸ್ತಿ ಲಭಿಸಿದೆ.

ಕೇಂದ್ರ ಸರ್ಕಾರ ಪ್ರಾಯೋಜಿತ ನವೋದಯ ಹಾಗೂ ಆದರ್ಶ ವಿದ್ಯಾಲಯಗಳಿಗೆ ಗ್ರಾಮೀಣ ಪ್ರದೇಶಗಳ ಮಕ್ಕಳು ಪ್ರವೇಶ ಪಡೆಯುವಂತಾಗಲು ಕಳೆದ ೨೦ ವರ್ಷಗಳಿಂದಲೂ ತಮ್ಮ ಪತ್ನಿ ಲಕ್ಷ್ಮಿ ಪಲ್ಲೇದ ಅವರೊಂದಿಗೆ ಮಕ್ಕಳಿಗೆ ಹಾಗೂ ಪೋಷಕರಿಗೆ ತರಬೇತಿ/ಮಾರ್ಗದರ್ಶನ ನೀಡುತ್ತಿದ್ದಾರೆ.

ಪಾಠ, ಪಠ್ಯೇತರ ಚಟುವಟಿಕೆಗಳಿಗೆ ಸಂಬAಧಿಸಿದAತೆ ವಿವಿಧ ಮಾಡೆಲ್‌ಗಳ ರಚನೆ ಹಾಗೂ ತರಬೇತಿ ನೀಡುತ್ತಿದ್ದಾರೆ. ಎನ್‌ಎಸ್‌ಎಸ್ ಮೂಲಕ ವಿದ್ಯಾರ್ಥಿ ಗಳಲ್ಲಿ ರಾಷ್ಟç ಪ್ರೇಮ ಹಾಗೂ ರಾಷ್ಟç ಭ್ರಾತೃತ್ವವನ್ನು ಮೂಡಿಸುವಂತಹ ಚಟುವಟಿಕೆಗಳನ್ನು ಹಮ್ಮಿಕೊಂಡಿರುವುದು, ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಪ್ರಜ್ಞೆ, ವೃತ್ತಿ ಮಾರ್ಗದರ್ಶನ ಹಾಗೂ ವ್ಯಕ್ತಿತ್ವ ವಿಕಸನ/ನಿರ್ವಹಣೆಯಲ್ಲಿ ಸಮುದಾಯದ ಸಹಭಾಗಿತ್ವ ಸೇರಿದಂತೆ ಬಹುಮುಖಿ ಸೇವೆಗಳಿಗಾಗಿ ಈ ಸಾಲಿನ ರಾಜ್ಯಪ್ರಶಸ್ತಿ ಇವರನ್ನು ಅರಸಿ ಬಂದಿದೆ.

ಇವರ ಪತ್ನಿ ಬಿ.ಕಾಂ.ಎಲ್‌ಎಲ್‌ಬಿ ಶಿಕ್ಷಣ ಪಡೆದಿದ್ದು, ನವೋದಯ ಹಾಗೂ ಆದರ್ಶ ವಿದ್ಯಾಲಯಗಳಿಗೆ ಸೇರ್ಪಡೆಗೊಳ್ಳುವ ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾರೆ. ಪುತ್ರ ಕಾರ್ತಿಕ್‌ಕುಮಾರ್ ಅಂತಿಮ ವರ್ಷದ ಬಿಎಸ್‌ಸಿ, ಪುತ್ರಿ ವೈಷ್ಣವಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ. –ವಿಜಯ್