ಮಡಿಕೇರಿ, ಸೆ. ೪ : ಕೋವಿಡ್-೧೯ ನಿಯಂತ್ರಣ ಸಂಬAಧ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಕಾರ್ಯಪಡೆಯನ್ನು ಬಲಪಡಿಸಿ ಕೋವಿಡ್ ಪಾಸಿಟಿವಿಟಿ ಪ್ರಮಾಣವನ್ನು ಕಡಿಮೆ ಮಾಡಲು ಶ್ರಮಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಸಂಬAಧ ಕೈಗೊಂಡಿರುವ ಕ್ರಮಗಳ ಬಗ್ಗೆ ಶನಿವಾರ ನಡೆದ ಪರಿಶೀಲನಾ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು.
ಕೋವಿಡ್ ಮೂರನೇ ಅಲೆ ಸಂಭವಿಸಿದಲ್ಲಿ ಮಕ್ಕಳ ಮೇಲೆ ಪರಿಣಾಮ ಉಂಟಾಗುತ್ತದೆ ಎಂಬ ಬಗ್ಗೆ ಮಾಹಿತಿ ಇರುವ ಹಿನ್ನೆಲೆ, ಯಾವ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಬಗ್ಗೆ ಮಾಹಿತಿ ಪಡೆದ ಉಪ ಲೋಕಾಯುಕ್ತರು, ವೈದ್ಯಾಧಿಕಾರಿಗಳು ಗ್ರಾಮಗಳಿಗೆ ತೆರಳಿ ಲಸಿಕೆಯ ಮಹತ್ವ ಬಗ್ಗೆ ಜಾಗೃತಿ ಮೂಡಿಸುವಂತೆ ನಿರ್ದೇಶನ ನೀಡಿದರು.
ಗ್ರಾಮ ಮಟ್ಟದಲ್ಲಿ ಆಶಾ ಕಾರ್ಯಕರ್ತರು, ಆರೋಗ್ಯ ಕಾರ್ಯಕರ್ತರು, ಪಿಡಿಒಗಳು, ಕಂದಾಯ ನಿರೀಕ್ಷಕರು ಹೀಗೆ ಹಲವರು ಗ್ರಾ.ಪಂ.ಕಾರ್ಯಪಡೆ ಜೊತೆಗೆ ತಂಡವಾಗಿ ಕಾರ್ಯನಿರ್ವಹಿಸುವಂತೆ ಅವರು ಹೇಳಿದರು.
ಗ್ರಾ.ಪಂ.ಮಟ್ಟದಲ್ಲಿ ವಾರ್ಡ್ವಾರು ಕಾರ್ಯಪಡೆಗಳು ಕರ್ತವ್ಯ ನಿರ್ವಹಿಸಬೇಕು. ಕೋವಿಡ್-೧೯ ನ್ನು ಗಂಭೀರವಾಗಿ ಪರಿಗಣಿಸಬೇಕು. ಆ ನಿಟ್ಟಿನಲ್ಲಿ ಶೈಕ್ಷಣಿಕವಾಗಿ ಜಾಗೃತಿ ಮೂಡಿಸುವಂತೆ ವೈದ್ಯಾಧಿಕಾರಿಗಳಿಗೆ ಉಪ ಲೋಕಾಯುಕ್ತರು ನಿರ್ದೇಶನ ನೀಡಿದರು.
ನೆರೆ ರಾಜ್ಯದಿಂದ ಬರುವವರ ಬಗ್ಗೆ ಹೆಚ್ಚಿನ ನಿಗಾವಹಿಸಬೇಕು. ಕೋವಿಡ್ ಪರೀಕ್ಷೆ ಮಾಡಬೇಕು. ಜನರಲ್ಲಿ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.
‘ಕೋವಿಡ್ ನಿಯಂತ್ರಣ ಸಂಬAಧ ಅಧಿಕಾರಿಗಳು ಯುದ್ದೋಪಾದಿಯಲ್ಲಿ ಕರ್ತವ್ಯ ನಿರ್ವಹಿಸಬೇಕು. ಜನರಲ್ಲಿ ಜಾಗೃತಿ ಮೂಡಿಸಬೇಕು. ನಂಬಿಕೆ ಉಳಿಸಿಕೊಂಡು ಶಕ್ತಿ ಮೀರಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಂತೆ ಪಾಟೀಲ್ ಅವರು ಸೂಚಿಸಿದರು.’
‘ಕೋವಿಡ್ ನಿಯಂತ್ರಿಸುವಲ್ಲಿ ಗ್ರಾ.ಪಂ. ಕಾರ್ಯಪಡೆಯು ಸೈನಿಕರಂತೆ ಕರ್ತವ್ಯ ನಿರ್ವಹಿಸಬೇಕು. ಕಾರ್ಯಪಡೆಯು ಗ್ರಾಮೀಣ ಜನರ ಬವಣೆಯನ್ನು ನಿವಾರಿಸುವಲ್ಲಿ ಕರ್ತವ್ಯ ನಿರ್ವಹಿಸಬೇಕು. ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಪಿಡಿಒಗಳು ಈ ಬಗ್ಗೆ ಹೆಚ್ಚಿನ ಗಮನಹರಿಸುವಂತೆ ಹೇಳಿದರು.’
ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಮಾತನಾಡಿ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಬಂದವರಲ್ಲಿಯೇ ಮತ್ತೆ ಪಾಸಿಟಿವ್ ಬರುತ್ತಿದೆ. ಆದ್ದರಿಂದ ಕಡ್ಡಾಯವಾಗಿ ೧೮ ವರ್ಷ ಮೇಲ್ಪಟ್ಟವರೆಲ್ಲರಿಗೂ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಈ ಸಂದರ್ಭ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ವೆಂಕಟೇಶ್ ಅವರು ಕೋವಿಡ್ ನಿಯಂತ್ರಣ ಸಂಬAಧಿಸಿದAತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಲಸಿಕಾ ಪ್ರಮಾಣ ಉತ್ತಮವಾಗಿದ್ದು, ೧೮ ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತದೆ. ಗಡಿ ಭಾಗದ ಗ್ರಾಮಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ತಿಳಿಸಿದರು.
ಕಳೆದ ಹತ್ತು ದಿನದಲ್ಲಿ ೩೬,೫೧೯ ಮಂದಿ ಪರೀಕ್ಷೆ ಮಾಡಲಾಗಿದ್ದು, ಇವರಲ್ಲಿ ೬೩೬ ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು, ಒಟ್ಟು ೬ ಜನರು ಮೃತಪಟ್ಟಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ ಮಾತನಾಡಿ ಗ್ರಾಮ ಮಟ್ಟದಲ್ಲಿ ಮಾಹಿತಿ ಶಿಕ್ಷಣದ ಕಾರ್ಯಕ್ರಮದ ಮೂಲಕ ಕೋವಿಡ್ ನಿಯಂತ್ರಣಕ್ಕೆ ಕ್ರಮವಹಿಸಲಾಗಿದೆ. ಕೋವಿಡ್ ನಿಯಂತ್ರಣ ಸಂಬAಧಿಸಿದAತೆ ಕರಪತ್ರ ಹಂಚುವುದು, ಮಾಹಿತಿ ಶಿಕ್ಷಣ ನೀಡುವುದು ಹೀಗೆ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಜಿಲ್ಲಾ ಲಸಿಕಾ ಅಧಿಕಾರಿ ಡಾ.ಗೋಪಿನಾಥ್ ಅವರು ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಲಸಿಕೆ ಪಡೆದವರಲ್ಲಿ ೮೫೪ ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಸಮುದಾಯ ಆರೋಗ್ಯ ಅಧಿಕಾರಿ ಡಾ.ಮಹೇಶ್ ಅವರು ಎರಡನೇ ಬಾರಿ ಲಸಿಕೆ ಪಡೆದವರಲ್ಲಿಯೂ ಪಾಸಿಟಿವ್ ಕಂಡುಬAದಲ್ಲಿ ಅಂತವರ ಗಂಟಲು, ಮೂಗು ದ್ರವ ಮಾದರಿಯನ್ನು ಮೈಸೂರಿಗೆ ಕಳುಹಿಸಿ ವರದಿ ತರಿಸಿಕೊಳ್ಳಲಾಗುತ್ತಿದೆ ಎಂದರು.
ಲೋಕಾಯುಕ್ತ ಪ್ರಕರಣಗಳಿಗೆ ಸಂಬAಧಿಸಿದAತೆ ಮಾಹಿತಿ ಪಡೆದ ಉಪ ಲೋಕಾಯುಕ್ತರು ಲೋಕಾಯುಕ್ತಕ್ಕೆ ಸಲ್ಲಿಕೆಯಾಗಿರುವ ಪ್ರಕರಣಗಳ ಇತ್ಯರ್ಥಕ್ಕೆ ಶ್ರಮಿಸುವಂತೆ ತಿಳಿಸಿದರು.
ಈ ಸಂದರ್ಭ ಭೂ ದಾಖಲೆಗಳ ಉಪ ನಿರ್ದೇಶಕ ಪಿ. ಶ್ರೀನಿವಾಸ್, ಸಹಾಯಕ ನಿರ್ದೇಶಕ ವಿರೂಪಾಕ್ಷ ಅವರು ಭೂ ದಾಖಲೆಗಳ ಸರ್ವೆ ಸಂಬAಧಿಸಿದAತೆ ಮಾಹಿತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು, ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಲೋಕಾಯುಕ್ತ ಎಸ್.ಪಿ., ಸಿ. ಮಲ್ಲಿಕ್, ಲೋಕಾಯುಕ್ತ ಡಿವೈಎಸ್‌ಪಿ ಪವನ್ ಕುಮಾರ್, ಕೊಡಗು ವೈದ್ಯಕೀಯ ಕಾಲೇಜಿನ ನಿರ್ದೇಶಕ ಡಾ.ಕಾರ್ಯಪ್ಪ, ಡಾ.ಮಂಜುನಾಥ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಆನಂದ್, ತಾಲೂಕು ವೈದ್ಯಾಧಿಕಾರಿಗಳಾದ ಡಾ. ಯತಿರಾಜು, ಡಾ. ಶ್ರೀನಿವಾಸ್, ಡಾ.ಮಂಜುನಾಥ ಅವರು ಮಾಹಿತಿ ನೀಡಿದರು.