ಮಡಿಕೇರಿ, ಸೆ. ೪: ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕೊಡಗು ಪ್ರಾದೇಶಿಕ ಕಚೇರಿ, ಜಿಲ್ಲಾ ಸಾರ್ವ ಜನಿಕ ಶಿಕ್ಷಣ ಇಲಾಖೆ ವತಿಯಿಂದ ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌ನ ಕೊಡಗು ಜಿಲ್ಲಾ ಸಮಿತಿ, ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಆಶ್ರಯದಲ್ಲಿ ಗೌರಿ ಗಣೇಶ ಹಬ್ಬಕ್ಕೆ ಪೂರ್ವಭಾವಿಯಾಗಿ ನಗರದ ಡಿಡಿಪಿಐ ಕಚೇರಿಯಲ್ಲಿ ‘ನಮ್ಮ ನಡೆ ಹಸಿರೆಡೆಗೆ' ‘ಗ್ರೋ ಗ್ರೀನ್' ಅಭಿಯಾನದಡಿ ಪರಿಸರ ಸ್ನೇಹಿ ಅರಿಶಿಣ ಗಣೇಶೋತ್ಸವ ಆಚರಣೆ ಜಾಗೃತಿ ಅಭಿಯಾನ : ೨೦೨೧ ಕುರಿತು ಜನಜಾಗೃತಿ ಮೂಡಿಸಲಾಯಿತು. ಅರಿಶಿಣ ಗಣೇಶೋತ್ಸವ ಆಚರಣೆ ಕುರಿತು ಮಾಹಿತಿ ನೀಡಿದ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿಯ ಜಿಲ್ಲಾ ಪರಿಸರ ಅಧಿಕಾರಿ ಜಿ.ಆರ್. ಗಣೇಶನ್, ಕೊರೊನಾ ಹಿನ್ನೆಲೆ ಎರಡು ವರ್ಷಗಳಿಂದ ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿ ಅರಿಶಿಣ ಗಣೇಶ ಮೂರ್ತಿಯನ್ನು ತಯಾರಿಸಿ ಪ್ರತಿಷ್ಠಾಪಿಸುವ ಮೂಲಕ ಸರಳವಾಗಿ ಆಚರಿಸಲಾಗುತ್ತಿದೆ. ರಾಜ್ಯದಲ್ಲಿ ಕೋವಿಡ್ ಹಿನ್ನೆಲೆ ಅರಿಶಿಣ ಮತ್ತಿತರ ಪರಿಸರ ಸ್ನೇಹಿ ವಸ್ತುಗಳನ್ನು ಬಳಕೆ ಮಾಡಿಕೊಂಡು ಅರಿಶಿಣ ಗಣೇಶ ಮೂರ್ತಿ ತಯಾರಿಸಬೇಕಿದೆ ಎಂದರು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ರಾಜ್ಯದಲ್ಲಿ ೧೦ ಲಕ್ಷ ಅರಿಶಿಣ ಗಣೇಶ ಮೂರ್ತಿ ತಯಾರಿಸುವ ಅಭಿಯಾನದ ಮೂಲಕ ವಿಶ್ವ ದಾಖಲೆಯ ಪ್ರಯತ್ನ ಮಾಡಲಾಗಿದೆ. ಈ ಅಭಿಯಾನಕ್ಕೆ ಜಿಲ್ಲೆಯ ಶಾಲಾ-ಕಾಲೇಜಿನ ಅಧ್ಯಾಪಕ ವೃಂದ, ಸ್ವಯಂ ಸೇವಕರು ಹಾಗೂ ನಾಗರಿಕರು ಕೈ ಜೋಡಿಸಬೇಕೆಂದು ಮನವಿ ಮಾಡಿದರು. ಅರಿಶಿಣ ಗಣೇಶ ಅಭಿಯಾನದ ಭಿತ್ತಿಪತ್ರ ಮತ್ತು ಸ್ಟಿಕ್ಕರ್‌ಗಳನ್ನು ಬಿಡುಗಡೆಗೊಳಿಸಿದರು.

ರಾಷ್ಟಿçÃಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ. ಪ್ರೇಮಕುಮಾರ್ ಮಾತನಾಡಿ, ಇಂತಹ ಪರಿಸರ ಸ್ನೇಹಿ ಕಾರ್ಯಕ್ರಮಗಳು ಮಕ್ಕಳಲ್ಲಿ ಪರಿಸರ ಪ್ರಜ್ಞೆ ಬೆಳೆಸುವು ದರೊಂದಿಗೆ ಅವರು ಭವಿಷ್ಯದಲ್ಲಿ ತಮ್ಮನ್ನು ಪರಿಸರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸಹಕಾರಿಯಾಗಿದೆ ಎಂದರು. ಮಡಿಕೇರಿ ಬಿಇಓ ಹೆಚ್.ಟಿ. ಮಂಜುನಾಥ್, ಡಿಡಿಪಿಐ ಕಚೇರಿಯ ಶಿಕ್ಷಣಾಧಿಕಾರಿ ಕೆ. ಕಾಂತರಾಜು, ಉಪ ಯೋಜನಾ ಸಮನ್ವಯಾ ಧಿಕಾರಿ ಎಂ. ಕೃಷ್ಣಪ್ಪ, ಬಿ.ಆರ್.ಸಿ. ನಳಿನಿ, ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ನ ಆಯುಕ್ತ ಜಿಮ್ಮಿ ಸಿಕ್ವೇರಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಸಹ ಕಾರ್ಯದರ್ಶಿ ಹೆಚ್.ಎಸ್. ಚೇತನ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇನ್ನಿತರರು ಹಾಜರಿದ್ದರು.