ಮಡಿಕೇರಿ, ಸೆ. ೪: ಪ್ರಸಕ್ತ ಸಾಲಿನಲ್ಲಿ ೬ ರಿಂದ ೧೮ ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಇತರರ ಪ್ರಾಣ ರಕ್ಷಣೆಗಾಗಿ ಧೈರ್ಯ-ಸಾಹಸ ಪ್ರದರ್ಶಿಸಿದ ಬಾಲಕರಿಗೆ “ಹೊಯ್ಸಳ” ಮತ್ತು ಬಾಲಕಿಯರಿಗೆ “ಕೆಳದಿ ಚೆನ್ನಮ್ಮ” ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ೬ ರಿಂದ ೧೮ ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ ಬಾಲಕರಿಗೆ “ಹೊಯ್ಸಳ” ಮತ್ತು ಬಾಲಕಿಯರಿಗೆ “ಕೆಳದಿ ಚೆನ್ನಮ್ಮ” ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು. ಪ್ರಕರಣವು ೨೦೨೦ ರ ಆಗಸ್ಟ್ ೧ ರಿಂದ ೨೦೨೧ ರ ಆಗಸ್ಟ್ ೧ ರೊಳಗೆ ನಡೆದಿರಬೇಕು. ೨೦೦೩ ರ ಆಗಸ್ಟ್ ೧ ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ.

ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.೧೦,೦೦೦/-ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. ೨೦೨೧ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‌ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ (ದೂ. ೦೮೨೭೨-೨೯೮೩೭೯) ಕಚೇರಿಗೆ ತಾ. ೨೦ ರೊಳಗೆ ಸಲ್ಲಿಸಬೇಕು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.