ಮಡಿಕೇರಿ, ಸೆ. ೫: ಕರ್ನಾಟಕ ಜನಶಕ್ತಿ ಸಂಘಟನೆಯಿAದ ವಾಟೆಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ೧ ರಿಂದ ೭ನೇ ತರಗತಿಯ ೮೮ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ಜನಶಕ್ತಿ ಸಂಘಟನೆಯ ಯುವ ಸಂಘಟಕ ಹೇಮಂತ್ ಕುಮಾರ್ ಹಾಗೂ ಪದಾಧಿಕಾರಿಗಳು, ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕೆÀ್ಷ ಕುಸುಮಾವತಿ, ಸದಸ್ಯರಾದ ಮೊಣ್ಣಪ್ಪ, ಹಮೀದ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಬ್ದುಲ್ಲ ಶಾಲಾ ಎಸ್.ಡಿ.ಎಂ.ಸಿ. ಸದಸ್ಯರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.