ಕೂಡಿಗೆ, ಸೆ. ೫: ಕೂಡಿಗೆ ಕೃಷಿ ಕ್ಷೇತ್ರದ ಆವರಣದಲ್ಲಿರುವ ಸರಕಾರಿ ಪದವಿ ಪೂರ್ವ ಕಾಲೇಜಿನ ಹೆಚ್ಚುವರಿಯಾಗಿ ಕಟ್ಟಡ ಕಾಮಗಾರಿಯನ್ನು ಸಂಬAಧಿಸಿದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೂಡಿಗೆ ಸರಕಾರಿ ಪದವಿಪೂರ್ವ ಕಾಲೇಜಿನ ಹೆಚ್ಚುವರಿಯಾಗಿ ಸಭಾಂಗಣದ ಕಾಮಗಾರಿಯು ಪ್ರವಾಹ ಪರಿಹಾರ ಯೋಜನೆಯ ಅಡಿಯಲ್ಲಿ ರೂ. ೨೨ ಲಕ್ಷ ವೆಚ್ಚದಲ್ಲಿ ನಡೆಯುತ್ತಿರುವ ಕಾಮಗಾರಿ ಬಹುತೇಕ ಮುಗಿದಿದೆ. ಕುಶಾಲನಗರ ವಲಯದ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಪೀಟರ್ ಮತ್ತು ಸಿಬ್ಬಂದಿ ವರ್ಗದವರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕೆ.ಕೆ. ನಾಗರಾಜಶೆಟಿ,್ಟ ಕಾಲೇಜು ಪ್ರಾಂಶುಪಾಲ ಡಾ. ಬಸಪ್ಪ, ಉಪನ್ಯಾಸಕರಾದ ಸತೀಶ್ ನಾಗಪ್ಪ ಸೇರಿದಂತೆ ಇನ್ನಿತರರು ಹಾಜರಿದ್ದರು.