ಮಡಿಕೇರಿ, ಸೆ. ೫: ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮಡಿಕೇರಿಯ ಕಚೇರಿಯಲ್ಲಿ ಖಾಲಿ ಇರುವ ಲೀಗಲ್ ಕಂ ಪ್ರೊಬೇಷನ್ ಆಫೀಸರ್ ಹುದ್ದೆಯನ್ನು ಹೊರಗುತ್ತಿಗೆಯಡಿ ವಿದ್ಯಾರ್ಹತೆ ಹಾಗೂ ಅನುಭವ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಲೀಗಲ್ ಕಂ ಪ್ರೊಬೇಷನ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಕಾನೂನು ವಿಷಯದಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಕನಿಷ್ಟ ೫ ವರ್ಷಗಳಿಂದ ವೃತ್ತಿನಿರತ ವಕೀಲರಾಗಿ ಅಭ್ಯಸಿಸುತ್ತಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು ಹಾಗೂ ೨೫ ರಿಂದ ೪೦ ವರ್ಷ ವಯೋಮಿತಿ ಹೊಂದಿರಬೇಕು.
ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ತಮ್ಮ ಸ್ವ ವಿವರ ಹಾಗೂ ಶೈಕ್ಷಣಿಕ ಪ್ರಮಾಣ ಪತ್ರಗಳ ನಕಲುಗಳೊಂದಿಗೆ ಅರ್ಜಿಯನ್ನು ತಾ. ೧೫ ರೊಳಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬ್ರಾಹ್ಮಣರ ಕಲ್ಯಾಣ ಮಂಟಪದ ಮುಂಭಾಗ, ಓಂಕಾರೇಶ್ವರ ದೇವಸ್ಥಾನ ರಸ್ತೆ, ಮಡಿಕೇರಿ(ದೂ. ೦೮೨೭೨-೨೨೮೮೦೦) ಈ ವಿಳಾಸಕ್ಕೆ ಸಲ್ಲಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅವರು ತಿಳಿಸಿದ್ದಾರೆ.