ಮಡಿಕೇರಿ, ಸೆ. ೫: ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ಸಹಯೋಗದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಮಡಿಕೇರಿಯ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರದಲ್ಲಿ ಮಿಸ್ಟಿ ಹಿಲ್ಸ್ ಅಧ್ಯಕ್ಷೆ ಅನಿತಾ ಪೂವಯ್ಯ, ಕಾರ್ಯದರ್ಶಿ ಪಿ.ಆರ್. ರಾಜೇಶ್ ರಕ್ತದಾನ ಮಾಡಿ ಶಿಬಿರಕ್ಕೆ ಚಾಲನೆ ನೀಡಿದರು. ಶಿಬಿರದ ಉದ್ಘಾಟನೆ ಸಂದರ್ಭ ಮಿಸ್ಟಿ ಹಿಲ್ಸ್ ನಿರ್ದೇಶಕರಾದ ಬಿ.ಕೆ. ರವೀಂದ್ರ ರೈ, ಶಿಲ್ಪರೈ, ರಕ್ತನಿಧಿ ಕೇಂದ್ರದ ಕರುಂಬಯ್ಯ ಹಾಜರಿದ್ದರು.