ಸುAಟಿಕೊಪ್ಪ, ಸೆ. ೫: ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಬಿ.ಬಿ. ಪ್ರೇಮಕುಮಾರಿ ವಯೋನಿವೃತ್ತಿ ಹೊಂದಿದ್ದು ಅವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಪಾಂಡು ಮಾತನಾಡಿ ಕೋವಿಡ್ ಸಂದರ್ಭದಲ್ಲಿ ಶಿಕ್ಷಕರಿಗೂ ಸರಕಾರ ಜವಬ್ದಾರಿ ನೀಡಿದ್ದು ಕೊರೊನಾ ನಿಯಂತ್ರಿಸಲು ಅವರು ಶ್ರಮ ವಹಿಸುತ್ತಿದ್ದಾರೆ ಎಂದು ಹೇಳಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಮಂಜುನಾಥ್ ಮಾತನಾಡಿ ಶಿಕ್ಷಕರ ಸೇವಾ ಭದ್ರತೆಯ ದಾಖಲಾತಿ ಆಗಿಂದಾಗ್ಗೆ ಪರಿಶೀಲಿಸ ಬೇಕು. ಲೋಪ ದೋಷವಿದ್ದರೆ ಇಲಾಖೆ ಗಮನಕ್ಕೆ ತಂದು ಸರಿಪಡಿಸಬೇಕು ನಿವೃತ್ತರಾದಾಗ ಲೋಪವಿದ್ದರೆ ಸರಕಾರದಿಂದ ದೊರೆಯಬೇಕಾದ ಪಿಂಚಣಿ ಇನ್ನಿತರ ಸೌಲಭ್ಯಗಳನ್ನು ಪಡೆದುಕೊಳ್ಳಲು ಕಷ್ಟವಾಗಲಿದೆ ಎಂದರು.
ಈ ಸಂದರ್ಭ ಸೋಮವಾರಪೇಟೆ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ನಾಮ ನಿರ್ದೇಶಿತ ಸಂಘಟನಾ ಕಾರ್ಯದರ್ಶಿ ಯೋಗೇಶ್, ಪ್ರಾಥಮಿಕ ಶಾಲಾ ಶಿಕ್ಷಣ ಸಂಯೋಜಕ ಶಿವಲಿಂಗ, ಸೋಮ ವಾರಪೇಟೆ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷೆ ಸೌಭಾಗ್ಯ, ಕೊಡಗು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಕರುಂಬಯ್ಯ, ಮುಖ್ಯೋಪಾಧ್ಯಾಯಿನಿ ಗೀತಾ, ಸೋಮವಾರಪೇಟೆ ತಾಲೂಕು ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಪರಿವೀಕ್ಷಕರಾದ ಪಲ್ಲೇದು, ಸೋಮವಾರಪೇಟೆ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ಇ. ನಂದ, ಕೊಡಗು ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಸಿ.ಟಿ. ಸೋಮಶೇಖರ್ ಹಾಗೂ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರು ಉಪಸ್ಥಿತರಿದ್ದರು.