ಮಡಿಕೇರಿ, ಸೆ.೬: ಸರ್ಕಾರ ಗೌರಿ ಗಣೇಶ ಹಬ್ಬ ಆಚರಣೆ ಸಂಬAಧ ಮಾರ್ಗಸೂಚಿ ಹೊರಡಿಸಿದ್ದು, ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿದ್ದರೂ ಶನಿವಾರ ಮತ್ತು ಭಾನುವಾರದಂದು ಗಣೇಶ ಮೂರ್ತಿ ವಿಸರ್ಜನೆಗೆ ಅವಕಾಶ ನೀಡ ಲಾಗುವುದು. ಆ ನಿಟ್ಟಿನಲ್ಲಿ ಸರ್ಕಾರದ ನಿಯಮವನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗೌರಿ ಗಣೇಶ ಹಬ್ಬ ಆಚರಣೆ ಸಂಬAಧ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆ ಮಾಹಿತಿ ಪಡೆದು ಅವರು ಮಾತನಾಡಿದರು. ಈ ಬಗ್ಗೆ ಗಮನ ಸೆಳೆದ ಚೇತನ್ ಅವರು ಕೊಡಗು ಜಿಲ್ಲೆಯಲ್ಲಿ ವಾರಾಂತ್ಯ ಕಫ್ರ‍್ಯೂ ಇರುವುದರಿಂದ ೫ ದಿನಗಳ ಒಳಗೆ ಗಣೇಶಮೂರ್ತಿ ವಿಸರ್ಜನೆಗೆ ಸರ್ಕಾರ ಅವಕಾಶ ಮಾಡಿರುವುದರಿಂದ ಕೊಡಗು ಜಿಲ್ಲೆಯಲ್ಲಿ ಶನಿವಾರ ಮತ್ತು ಭಾನುವಾರದಂದು ಗಣೇಶಮೂರ್ತಿ ವಿಸರ್ಜನೆಗೆ ಅವಕಾಶ ಮಾಡಬೇಕೆಂದು ಕೋರಿದರು.

ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಅವಕಾಶ ಮಾಡಲಾಗುವುದು. ಆದರೆ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಬೇಕು. ಸಂಜೆ ೬ ಗಂಟೆಯೊಳಗೆ ಗಣೇಶ ಮೂರ್ತಿ ವಿಸರ್ಜನೆ ಮಾಡಬೇಕು ಎಂದು ಅವರು ಹೇಳಿದರು.

ಕಳೆದ ಬಾರಿಯಂತೆ ಶಾಂತಿಯುತ ವಾಗಿ ಗೌರಿ ಗಣೇಶ ಹಬ್ಬ ಆಚರಿಸ ಬೇಕು. ಕೋವಿಡ್ ೧೯ ಇರುವುದರಿಂದ ಎಲ್ಲರೂ ಜಿಲ್ಲಾಡಳಿತದ ಜೊತೆ ಸಹಕರಿಸುವಂತೆ ಕೋರಿದರು.

ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಸ್ಥಳ ಮತ್ತು ವಿಸರ್ಜನೆ ಸಂಬAಧ ಸಾರ್ವಜನಿಕರಿಂದ ಮನವಿ ಸ್ವೀಕರಿಸುವಲ್ಲಿ ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ಮಾಡ ಬಾರದು, ಸುಗಮ ಸುಲಲಿತವಾಗಿ ಸಾರ್ವಜನಿಕರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚಿಸಿದರು.

(ಮೊದಲ ಪುಟದಿಂದ) ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಈಗಾಗಲೇ ಸರ್ಕಾರ ಗೌರಿ ಹಣೇಶ ಹಬ್ಬ ಆಚರಣೆ ಸಂಬAಧ ಮಾರ್ಗಸೂಚಿ ಹೊರಡಿಸಿದೆ. ಆ ದಿಸೆಯಲ್ಲಿ ಪ್ರತಿಯೊಬ್ಬರು ಸುರಕ್ಷತೆ ಕಡೆ ಗಮನ ಹರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪಿಸುವವರು ಪೊಲೀಸ್ ಇಲಾಖೆಗೆ ಮನವಿ ಮಾಡಬೇಕಿದೆ ಎಂದರು. ಆ ನಿಟ್ಟಿನಲ್ಲಿ ಏಕಗವಾಕ್ಷಿಯಡಿ ಮನವಿ ಸ್ವೀಕರಿಸಲಾಗುವುದು, ಪೊಲೀಸ್, ಕಂದಾಯ, ನಗರಸಭೆ, ಸೆಸ್ಕ್ ಇತರ ಇಲಾಖೆಗಳು ಒಟ್ಟುಗೂಡಿ ಕಾರ್ಯ ನಿರ್ವಹಿಸಲಿವೆ ಎಂದರು.

ಪೊಲೀಸ್ ಇನ್ಸ್ಪೆಕ್ಟರ್ ಮೇದಪ್ಪ ಅವರು ಗಣೇಶಮೂರ್ತಿ ಪ್ರತಿಷ್ಠಾಪಿಸುವ ಮತ್ತು ವಿಸರ್ಜನೆ ಸ್ಥಳ ಹಾಗೂ ಸಮಯವನ್ನು ಮನವಿ ಪತ್ರದಲ್ಲಿ ತಿಳಿಸುವಂತೆ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನು ಕೋರಿದರು. ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು, ಡಿವೈಎಸ್ಪಿ ಜಯಕುಮಾರ್, ಗಜೇಂದ್ರ ಪ್ರಸಾದ್, ಶೈಲೇಂದ್ರ ಕುಮಾರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಾಜು, ಪೌರಾಯುಕ್ತ ರಾಮದಾಸ್, ಜಿ.ಪಂ.ಯೋಜನಾ ನಿರ್ದೇಶಕ ಶ್ರೀಕಂಠಮೂರ್ತಿ, ತಹಶೀಲ್ದಾರ್ ಮಹೇಶ್ ಇತರರು ಇದ್ದರು.