ಮಡಿಕೇರಿ, ಸೆ. ೭: ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಾ. ೯ ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ತಾ. ೯ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಜಿ.ಪಂ. ಸಭಾಂಗಣದಲ್ಲಿ ಕೊಡಗು ಜಿಲ್ಲೆಯ ಕೋವಿಡ್-೧೯ ನಿರ್ವಹಣೆ ಹಾಗೂ ನೆರೆ ಹಾವಳಿ ಪರಿಹಾರ ಕಾರ್ಯಗಳ ಕುರಿತು ಪರಿಶೀಲನಾ ಸಭೆ ನಡೆಸಲಿದ್ದಾರೆ. ನಂತರ ಮಧ್ಯಾಹ್ನ ೧೨.೩೦ ಗಂಟೆಗೆ ಅಮೃತ ಗ್ರಾಮ ಗ್ರಾಮೀಣ ವಸತಿ ಯೋಜನೆ ಹಾಗೂ ಅಮೃತ ಗ್ರಾಮ ಯೋಜನೆ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ. ಬಿ. ಉದಯ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.