ಮಡಿಕೇರಿ, ಸೆ. ೬: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ೨೦೨೧ರ ಟೋಕಿಯೋ ಒಲಂಪಿಕ್‌ನಲ್ಲಿ ಭಾರತದ ಮಹಿಳೆಯರ ಹಾಕಿ ತಂಡದ ಸಹಾಯಕ ಹಾಕಿ ತರಬೇತುದಾರರಾಗಿ ಕರ್ತವ್ಯ ನಿರ್ವಹಿಸಿದ್ದ ಬಿ.ಎಸ್. ಅಂಕಿತಾ ಸುರೇಶ್ ಅವರಿಗೆ ತಾ. ೭ ರಂದು (ಇಂದು) ಸಂಜೆ ೫ ಗಂಟೆಗೆ ನಗರದ ಜಿ.ಪಂ. ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.