ಕಾನೂನು ಸುವ್ಯವಸ್ಥೆ ಮತ್ತು ಅಪರಾಧ ನಿಯಂತ್ರಣದಲ್ಲಿ ಯಾವುದೇ ರಾಜಿ ಇಲ್ಲ

ಬೆಂಗಳೂರು, ಸೆ. ೬: ಕಾನೂನು ಸುವ್ಯವಸ್ಥೆ ಮತ್ತು ಅಪರಾಧ ನಿಯಂತ್ರಣದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದರು. ಅವರು ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ರಾಜ್ಯದ ಪೊಲೀಸ್ ಇಲಾಖೆ ಅತ್ಯಂತ ದಕ್ಷ, ನಿಷ್ಪಕ್ಷಪಾತ ಹಾಗೂ ನಿಷ್ಠುರವಾಗಿದ್ದು, ಈ ಪರಂಪರೆಯನ್ನು ಮುಂದುವರೆಸಬೇಕು. ಆಗ ಮಾತ್ರ ಜನಸಾಮಾನ್ಯರಿಗೆ ಸುರಕ್ಷತೆ ಹಾಗೂ ಆತ್ಮಸ್ಥೆöÊರ್ಯ ನೀಡಲು ಸಾಧ್ಯ. ಕಾನೂನು ಸುವ್ಯವಸ್ಥೆಯ ಜೊತೆಗೆ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು. ಜನರ ಸೇವೆ ಮಾಡಲು ಪೊಲೀಸರಿಗೆ ಅಧಿಕಾರವನ್ನು ನೀಡಲಾಗಿದೆ. ಈ ಅಧಿಕಾರವನ್ನು ಸೂಕ್ತ ರೀತಿಯಲ್ಲಿ ಬಳಕೆ ಮಾಡುವ ಗುರುತರ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ತಿಳಿಸಿದರು. ಬಹಳ ವರ್ಷಗಳ ನಂತರ ಮೊದಲ ಬಾರಿಗೆ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶ ನಡೆಯುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಕಳೆದ ಎರಡು ವರ್ಷಗಳಲ್ಲಿ ಇಲಾಖೆಯಲ್ಲಿ ಸಾಕಷ್ಟು ಸುಧಾರಣೆಗಳಾಗಿವೆ. ವಿಧಿವಿಜ್ಞಾನ ಪ್ರಯೋಗಾಲಯಗಳು, ನೇಮಕಾತಿ ಹಾಗೂ ವಸತಿ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು.

ನವೆAಬರ್ ಅಂತ್ಯಕ್ಕೆ ಎಲ್ಲರಿಗೂ ಲಸಿಕೆ ನೀಡುವ ಗುರಿ

ಬೆಂಗಳೂರು, ಸೆ. ೬: ನವೆಂಬರ್ ಅಂತ್ಯದೊಳಗೆ ರಾಜ್ಯದ ಎಲ್ಲ ವಯಸ್ಕರಿಗೂ ಎರಡೂ ಡೋಸ್ ಕೋವಿಡ್ ಲಸಿಕೆ ಪೂರ್ಣಗೊಳಿಸುವ ಗುರಿಯನ್ನು ನಿಗದಿಪಡಿಸಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಕೋವಿಡ್ ಲಸಿಕಾ ಅಭಿಯಾನದಲ್ಲಿ ಕಡಿಮೆ ಸಾಧನೆ ಮಾಡಿದ ೨೩ ಜಿಲ್ಲೆಗಳೊಂದಿಗೆ ವೀಡಿಯೋ ಸಂವಾದ ನಡೆಸಿದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಲಸಿಕೆ ಅಭಿಯಾನಕ್ಕೆ ವೇಗ ನೀಡುವ ಬಗ್ಗೆ ಹಾಗೂ ಈ ತಿಂಗಳೊಳಗೆ ಎಲ್ಲರಿಗೂ ಮೊದಲ ಡೋಸ್ ಪೂರ್ಣಗೊಳಿಸಲು ಸೂಚಿಸಲಾಗಿದೆ. ನವೆಂಬರ್ ಅಂತ್ಯದೊಳಗೆ ಎಲ್ಲ ವಯಸ್ಕರಿಗೆ ಲಸಿಕೆ ನೀಡುವ ಗುರಿ ತಲುಪಬೇಕೆಂದು ಸೂಚನೆ ನೀಡಲಾಗಿದೆ. ಜೊತೆಗೆ ಕೊರೊನಾ ಪರೀಕ್ಷೆ, ಆಕ್ಸಿಜನ್ ಘಟಕ ಆರಂಭ, ಸಿವಿಲ್ ಕಾರ್ಯ ಮೊದಲಾದವುಗಳ ಬಗ್ಗೆ ಚರ್ಚಿಸಲಾಗಿದೆ. ಮುಖ್ಯಮಂತ್ರಿಗಳು ಕೂಡ ಹಲವು ಸಲಹೆ, ಸೂಚನೆ ನೀಡಿದ್ದಾರೆ ಎಂದರು. ಕಳೆದ ವರ್ಷ ಹೆಚ್ಚು ಸೋಂಕಿತರಿದ್ದಾಗಲೂ ಸರಳ ಗಣೇಶೋತ್ಸವಕ್ಕೆ ಅವಕಾಶ ನೀಡಲಾಗಿತ್ತು. ಈ ವರ್ಷ ೦.೭% ಪಾಸಿಟಿವಿಟಿ ದರವಿದ್ದು, ಹೆಚ್ಚು ಸುರಕ್ಷತಾ ನಿಯಮ ಪಾಲಿಸಲು ಸೂಚಿಸಲಾಗಿದೆ. ಯಾವುದೇ ಜಿಲ್ಲೆಯಲ್ಲಿ ೨% ಗಿಂತ ಹೆಚ್ಚಾದರೆ ಅಲ್ಲಿ ಬೇರೆ ಕ್ರಮ ವಹಿಸಲಾಗುತ್ತದೆ ಎಂದರು. ಕೇರಳದಲ್ಲಿ ಒಬ್ಬ ಬಾಲಕನಿಗೆ ನಿಫಾ ವೈರಸ್ ಸೋಂಕು ಕಂಡುಬAದಿದೆ. ಈ ಸೋಂಕು ರಾಜ್ಯದಲ್ಲಿ ಎಲ್ಲೂ ಹರಡದಂತೆ ಕ್ರಮ ವಹಿಸಲಾಗಿದೆ. ಗಡಿಭಾಗಗಳಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಮೂರನೇ ಅಲೆ ತಡೆಗಟ್ಟುವುದು ಮುಖ್ಯವಾದ ಗುರಿ. ಇದಕ್ಕೆ ಬೇಕಾದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದರೆ ಮೊದಲು ಅಲೆಯನ್ನು ತಡೆಯಬೇಕಿದೆ ಎಂದರು.

ಅಧಿವೇಶನದ ನಂತರ ದೇವಸ್ಥಾನಗಳಿಗೆ ಭೇಟಿ ನೀಡಿ ಸಮಸ್ಯೆ ಪರಿಹಾರ

ಬೆಂಗಳೂರು, ಸೆ. ೬: ರಾಜ್ಯ ಹಾಗೂ ಹೊರ ರಾಜ್ಯದ ದೇವಸ್ಥಾನಗಳಲ್ಲಿ ರಾಜ್ಯದ ಭಕ್ತರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ವಿಧಾನ ಮಂಡಲ ಅಧಿವೇಶನ ಮುಗಿದ ನಂತರ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ, ಅಲ್ಲಿಯೇ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ವಕ್ಫ್ ಹಾಗೂ ಹಜ್ ಸಚಿವರಾದ ಶಶಿಕಲಾ ಜೊಲ್ಲೆಯವರು ತಿಳಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಧಾರ್ಮಿಕ ಪರಿಷತ್ತಿನ ಸಭೆ ನಡೆಸಿದರು. ಸಭೆಯಲ್ಲಿ ಮುಜರಾಯಿ ಇಲಾಖೆಯಲ್ಲಿ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ತೆರಳುವ ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ ಇರುವ ಪ್ರಮುಖ ದೇವಸ್ಥಾನಗಳ ಸಮಸ್ಯೆಗಳ ಕುರಿತು ಚರ್ಚಿಸಲಾಗಿದ್ದು, ಇಲಾಖೆಯಲ್ಲಿ ನಾವು ಮಾಡಬೇಕಾದಂತಹ ಕೆಲಸ ಬಹಳ ಇದೆ. ಇಡೀ ಜಗತ್ತಿನಲ್ಲಿಯೇ ನಮ್ಮ ಸಂಸ್ಕೃತಿ, ಆದ್ಯಾತ್ಮಿಕತೆಗೆ ಹೆಸರುವಾಸಿಯಾಗಿದ್ದೇವೆ. ಅದನ್ನು ಉಳಿಸಿಕೊಂಡು ಹೋಗುವ ಕೆಲಸ ನಮ್ಮದು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಣ್ಣಪುಟ್ಟದಕ್ಕೆ ರೌಡಿಶೀಟರ್ ಪಟ್ಟ ಕಟ್ಟುವಂತಿಲ್ಲ

ಬೆAಗಳೂರು, ಸೆ. ೧೫: ಇನ್ಮುಂದೆ ಸಣ್ಣಪುಟ್ಟ ಅಪರಾಧಗಳಿಗೆ ರೌಡಿ ಪಟ್ಟ ಕಟ್ಟುವಂತಿಲ್ಲ. ಜೊತೆಗೆ ಅಕ್ರಮ ಕ್ಯಾಸಿನೋ ತಡೆಯದಿದ್ದರೆ ಪೊಲೀಸರೇ ಹೊಣೆ ಹೊರಬೇಕಾಗುತ್ತದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಆದೇಶಿಸಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರಗ ಜ್ಞಾನೇಂದ್ರ, ರಾಜ್ಯದ ಎಲ್ಲ ಕಡೆ ಸಣ್ಣಪುಟ್ಟ ಕಾರಣಕ್ಕೆ ರೌಡಿಪಟ್ಟಿ ಕಟ್ಟಲಾಗಿದೆ. ಸದಾ ಕಾಲ ಸಮಾಜ ಕಂಟಕರಾಗಿ ಭಯಹುಟ್ಟಿಸುತ್ತಾ ಇರುವವರು ರೌಡಿಪಟ್ಟಿಗೆ ಸೇರಿಸುತ್ತಾರೆ. ಸಾವಿರಾರು ಜನರನ್ನು ರೌಡಿ ಪಟ್ಟಿಯಲ್ಲಿ ಇಡುವುದರಲ್ಲಿ ಅರ್ಥವೇ ಇಲ್ಲ. ಹೀಗಾಗಿ ನಿಯಮಾವಳಿ ಪ್ರಕಾರ ಪರಿಶೀಲಿಸಿ ರೌಡಿಪಟ್ಟಿ ಪರಾಮರ್ಶೆ ಮಾಡಲು ಸೂಚಿಸಲಾಗಿದೆ ಅನೇಕ ಮಾನದಂಡ ಇಟ್ಟು ರೌಡಿ ಶೀಟರ್ ಪಟ್ಟಿ ಪರಾಮರ್ಶೆ ಮಾಡಲಾಗುವುದು. ಆ ಮಾನದಂಡದ ಆಧಾರದಲ್ಲಿ ಮಾತ್ರ ಅದನ್ನು ತೆಗೆಯುತ್ತೇನೆ. ರಾಜ್ಯದಾದ್ಯಂತ ಸಣ್ಣಪುಟ್ಟ ಚಳವಳಿಗಾರರ ಮೇಲೆ ರೌಡಿಶಿಟ್ ಹಣೆ ಪಟ್ಟಿ ಕಟ್ಡಿದ್ದಾರೆ. ಇದರಲ್ಲಿ ಯಾವುದೇ ಬೇರೆ ಉದ್ದೇಶ ಇಲ್ಲ. ಜೊತೆಗೆ ರಾಜಕೀಯ ಕಾರಣಕ್ಕೂ ನಾವು ಹೀಗೆ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಮಾನವ ಕಳ್ಳ ಸಾಗಣೆ ಪ್ರಕರಣ: ೧೩ ಬಾಂಗ್ಲಾದೇಶಿಗರ ವಿರುದ್ಧ ಶೀಟ್

ಬೆಂಗಳೂರು, ಸೆ. ೧೫: ಅಕ್ರಮವಾಗಿ ಭಾರತದೊಳಗೆ ನುಸುಳಿದ ನಂತರ ನೆರೆಯ ರಾಷ್ಟ್ರದಿಂದ ಮಹಿಳೆಯರು ಮತ್ತು ಮಕ್ಕಳನ್ನು ಕಳ್ಳ ಸಾಗಣೆಯಲ್ಲಿ ತೊಡಗಿದ್ದ ೧೩ ಬಾಂಗ್ಲಾದೇಶದ ಪ್ರಜೆಗಳ ವಿರುದ್ಧ ಎನ್ ಐಎ ಸೋಮವಾರ ಇಲ್ಲಿನ ವಿಶೇಷ ನ್ಯಾಯಾಲಯವೊಂದರಲ್ಲಿ ಚಾರ್ಜ್ ಶೀಟ್ ದಾಖಲಿಸಿದೆ. ಎಲ್ಲಾ ಬಾಂಗ್ಲಾದೇಶಿಗರ ವಿರುದ್ಧ ವಿದೇಶಿ ಕಾಯ್ದೆ, ಅನೈತಿಕವಾಗಿ ಕಳ್ಳ ಸಾಗಣೆ (ತಡೆ) ಕಾಯ್ದೆ ಮತ್ತು ಐಪಿಸಿ ಸೆಕ್ಷನ್ ಗಳೊಂದಿಗೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಎನ್ ಐಎ ಅಧಿಕಾರಿಯೊಬ್ಬರು ಹೇಳಿದ್ದಾರೆ. ಜೂನ್ ನಲ್ಲಿ ರಾಮಮೂರ್ತಿ ನಗರ ವ್ಯಾಪ್ತಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿದಾಗ ೧೩ ಆರೋಪಿಗಳು ಸಿಕ್ಕಿ ಬಿದ್ದಿದ್ದರು. ಈ ವೇಳೆ ಬಾಂಗ್ಲಾದೇಶದ ಏಳು ಮಹಿಳೆಯರು ಹಾಗೂ ಒಂದು ಮಗುವನ್ನು ಮಾನವ ಕಳ್ಳ ಸಾಗಣೆದಾರರ ವಶದಿಂದ ರಕ್ಷಿಸಲಾಗಿತ್ತು ಎಂದು ಅವರು ಹೇಳಿದ್ದಾರೆ. ಉದ್ಯೋಗ ಕೊಡಿಸುವ ನೆಪದಲ್ಲಿ ಮಹಿಳೆಯರನ್ನು ಬಾಂಗ್ಲಾದೇಶದಿAದ ಭಾರತಕ್ಕೆ ಕಳ್ಳಸಾಗಣೆ ಮಾಡಲಾಗುತಿತ್ತು, ಬಳಿಕ ಅವರನ್ನು ವೇಶ್ಯಾವಾಟಿಕೆಗೆ ದೂಡಲಾಗುತಿತ್ತು ಎಂಬ ಮಾಹಿತಿ ಲಭ್ಯವಾಗಿದ್ದರಿಂದ ಎನ್ ಐಎ ಪ್ರತ್ಯೇಕ ಪ್ರಕರಣ ದಾಖಲಿಸಿತ್ತು ಎಂದು ಅವರು ತಿಳಿಸಿದ್ದಾರೆ. ಆರೋಪಿಗಳು ನಕಲಿ ಗುರುತಿನ ಚೀಟಿಗಳನ್ನು ಸಹ ಹೊಂದಿದ್ದರು ಮತ್ತು ಈ ನಕಲಿ ದಾಖಲೆಗಳನ್ನು ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಮತ್ತಿತರ ಭಾರತೀಯ ಗುರುತಿನ ಚೀಟಿಗಳನ್ನು ತಮ್ಮ ಸಂತ್ರಸ್ತರಿಗೆ ಪಡೆಯಲು ಬಳಸಿದ್ದಾರೆ. ಈ ಪ್ರಕರಣದಲ್ಲಿ ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಎನ್ ಐಎ ಅಧಿಕಾರಿ ತಿಳಿಸಿದ್ದಾರೆ.