ಮಡಿಕೇರಿ, ಸೆ. ೨೧: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮತ್ತು ಇತರೆ ಸಮುದಾಯದ ಡಾ. ಬಿ.ಆರ್. ಅಂಬೇಡ್ಕರ್ ಅನುಯಾಯಿಗಳನ್ನು ಮಹಾರಾಷ್ಟçದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಆಹ್ವಾನಿಸಲಾಗಿದೆ.
ಯಾತ್ರೆಗೆ ತೆರಳುವ ಅರ್ಹ ಯಾತ್ರಾರ್ಥಿಗಳು ಇಲಾಖಾ ವೆಬ್‌ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ದಾಖಲಾತಿಗಳನ್ನು ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ಇಲ್ಲಿಗೆ ತಾ. ೨೬ ರ ಸಂಜೆ ೫.೩೦ ಗಂಟೆಯೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ೯೪೮೦೮೪೩೦೩೭, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ೦೮೨೭೨-೨೨೩೫೫೨, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ೦೮೨೭೬-೨೮೧೧೧೫ ಮತ್ತು ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ ೦೮೨೭೪-೨೪೯೪೭೬ ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ತಿಳಿಸಿದ್ದಾರೆ.