ಮಡಿಕೇರಿ, ಸೆ. ೨೧: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅಧೀನದಲ್ಲಿ ಬರುವ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಹಾಗೂ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಅರ್ಹ ಮಕ್ಕಳಿಗೆ ೬ನೇ ತರಗತಿ ಉಚಿತ ಪ್ರವೇಶವನ್ನು ಕಲ್ಪಿಸಲಾಗಿದೆ.
ಅರ್ಹ ಪೌರಕಾರ್ಮಿಕರ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ-೦೮೨೭೨-೨೨೫೫೩೧ ಮತ್ತು ಜಿಲ್ಲಾ ಸಮನ್ವಯಾಧಿಕಾರಿಗಳು, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಗರಗಂದೂರು-೯೬೧೧೩೦೭೬೪೬ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.