ಮಡಿಕೇರಿ, ಸೆ. ೨೧: ಸರ್ವೋದಯ ಸಮಿತಿ ಹಾಗೂ ಲಯನ್ಸ್ ಕ್ಲಬ್ ಮಡಿಕೇರಿ ಇವರ ಸಹಯೋಗದಲ್ಲಿ ಗಾಂಧಿ ಜಯಂತಿಯ ಅಂಗವಾಗಿ ಪ್ರೌಢಶಾಲಾ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ‘ಸ್ವಾತಂತ್ರö್ಯ ಅಮೃತ ಮಹೋತ್ಸವ’ದ ಕುರಿತು ಭಾಷಣ ಸ್ಪರ್ಧೆ ಹಾಗೂ ಸಾರ್ವಜನಿಕರಿಗೆ ದೇಶಭಕ್ತಿ ಗೀತೆ-ಗಾಯನ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ತಾ. ೩೦ ರಂದು ಬೆಳಿಗ್ಗೆ ೧೦ ಗಂಟೆಗೆ ಮಡಿಕೇರಿಯ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಲಯನ್ಸ್ ಕ್ಲಬ್ ಅಧ್ಯಕ್ಷೆ ಕವಿತ ಮೊಣ್ಣಪ್ಪ ಚಾಲನೆ ನೀಡಲಿದ್ದಾರೆ. ಸ್ಪರ್ಧೆಯಲ್ಲಿ ಭಾಗವಹಿಸುವವರು ೯೮೮೬೧೮೧೬೧೨, ೯೪೪೮೦೦೫೬೪೩ ಸಂಪರ್ಕಿಸಬಹುದಾಗಿದೆ.