ಮಡಿಕೇರಿ, ಸೆ. ೨೩ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಇವರ ಸಂಯುಕ್ತಾಶ್ರಯದಲ್ಲಿ ೨೦೨೧-೨೨ ರ ಸಾಲಿನ ಎನ್. ಮಹಾಬಲೇಶ್ವರ ಭಟ್ ದತ್ತಿ ಉಪನ್ಯಾಸ ಕಾರ್ಯಕ್ರಮ ತಾ. ೨೪ರಂದು(ಇAದು) ಅಪರಾಹ್ನ ೨ ಗಂಟೆಗೆ ಮೂರ್ನಾಡು ವಿದ್ಯಾ ಸಂಸ್ಥೆಯಲ್ಲಿ ನಡೆಯಲಿದೆ. ತಾಲೂಕು ಅಧ್ಯಕ್ಷ ನವೀನ್ ಅಂಬೆಕಲ್ಲು ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದ ಉದ್ಘಾಟನೆಯನ್ನು ಮೂರ್ನಾಡು ವಿದ್ಯಾಸಂಸ್ಥೆ ಗೌರವ ಕಾರ್ಯದರ್ಶಿ ಪೆಮ್ಮುಡಿಯಂಡ ವೇಣು ಅಪ್ಪಣ್ಣ ಅವರು ನೆರವೇರಿಸಲಿದ್ದಾರೆ. ವಿಶೇಷ ಅತಿಥಿಗಳಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೇಶವ ಕಾಮತ್, ಮುಖ್ಯ ಅತಿಥಿಗಳಾಗಿ ಮಾಜಿ ಅಧ್ಯಕ್ಷ ಟಿ. ಪಿ. ರಮೇಶ್, ಎಂ.ಎನ್. ಕುಮಾರ್ ಬಿಳಿಗೇರಿ, ಶಿಕ್ಷಕ ಪ್ರಶಾಂತ್ ಎಸ್. ಡಿ. ಉಪಸ್ಥಿತರಿರುವರು.