ಮಡಿಕೇರಿ, ನ. ೨೩: ಆರ್ಥಿಕವಾಗಿ ಹಿಂದುಳಿದ ಗ್ರಾಮೀಣ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ವಿಜ್ಞಾನ, ತಂತ್ರಜ್ಞಾನ ಹಾಗೂ ನೂತನ ಆವಿಷ್ಕಾರಗಳ ಬಗೆ ಜ್ಞಾನ ಒದಗಿಸುವುದು ಓಜಸ್ವಿ ಟ್ರಸ್ಟ್ನ ಮುಖ್ಯ ಧ್ಯೇಯವಾಗಿದೆ ಎಂದು ಟ್ರಸ್ಟ್ನ ಸಂಸ್ಥಾಪಕರಲ್ಲಿ ಪ್ರಮುಖರಾದ ಡಾ. ಕವಿತಾ ಪಿ.ಸಿ. ಹೇಳಿದರು. ಮೂರ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಟ್ರಸ್ಟ್ನ ಮೊದಲ ಕಾರ್ಯಕ್ರಮದಲ್ಲಿ ‘ವಿದ್ಯಾರ್ಥಿಗಳ ಉನ್ನತಿಗೆ ಗೆಲುವಿನ ಸೂತ್ರ’ ಎನ್ನುವ ವಿಷಯ ಸಂಬAಧ ಅವರು ಮಾತನಾಡಿದರು.
ಜಾಗತಿಕ ಮಟ್ಟದಲ್ಲಿ ದಿನೇ ದಿನೇ ಸಾಕಷ್ಟು ಸವಾಲುಗಳು ಎದುರಾಗುತ್ತಿವೆೆÉ. ಶೀಘ್ರವಾಗಿ ಅಭಿವೃದ್ಧಿಯ ಪಥದಲ್ಲಿ ಸಾಗಲು ತಂತ್ರಜ್ಞಾನ ಬಳಕೆ ಅತ್ಯಗತ್ಯವಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ತಂತ್ರಜ್ಞಾನ ಕ್ಷೇತ್ರದ ಜ್ಞಾನವನ್ನು ತಿಳಿದುಕೊಳ್ಳುವುದು ಅನಿವಾರ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ಬೆಂಗಳೂರಿನ ಜಸ್ಟ್ ರೋಬೋಟಿಕ್ಸ್ನ ಸಿ.ಇ.ಓ. ಬ್ರಿಜೇಶ್ ರೊಬೊಟಿಕ್ಸ್ ಪ್ರದರ್ಶನ ಮೂಲಕ ಜಾಗತಿಕ ಮಟ್ಟದಲ್ಲಿ ರೊಬೊಟ್‌ಗಳ ಕಾರ್ಯವೈಖರಿ ಕುರಿತು ಮಾಹಿತಿ ನೀಡಿದರು. ಮುಂದಿನ ದಿನಗಳಲ್ಲಿ ಈ ಕ್ಷೇತ್ರದಲ್ಲಿನ ವಿಪುಲ ಉದ್ಯೋಗಾವಕಾಶಗಳು ಮತ್ತು ಆವಿಷ್ಕಾರಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.
ವಿದ್ಯಾರ್ಥಿಗಳು ಆಸಕ್ತಿಯಿಂದ ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಮಾಹಿತಿ ಪಡೆದುಕೊಂಡರು.
ಇದಕ್ಕೂ ಮೊದಲು ನಡೆದ ಸಮಾರಂಭದಲ್ಲಿ ಮೂರ್ನಾಡು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಚಂದ್ರಮೌಳಿ ಕಾರ್ಯಕ್ರಮ ಉದ್ಘಾಟಿಸಿದರು. ಗ್ರಾ.ಪಂ. ಅಧ್ಯಕ್ಷೆ ಕ್ಷೇತ್ರದಲ್ಲಿನ ವಿಪುಲ ಉದ್ಯೋಗಾವಕಾಶಗಳು ಮತ್ತು ಆವಿಷ್ಕಾರಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.
ವಿದ್ಯಾರ್ಥಿಗಳು ಆಸಕ್ತಿಯಿಂದ ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಮಾಹಿತಿ ಪಡೆದುಕೊಂಡರು.
ಇದಕ್ಕೂ ಮೊದಲು ನಡೆದ ಸಮಾರಂಭದಲ್ಲಿ ಮೂರ್ನಾಡು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಚಂದ್ರಮೌಳಿ ಕಾರ್ಯಕ್ರಮ ಉದ್ಘಾಟಿಸಿದರು. ಗ್ರಾ.ಪಂ. ಅಧ್ಯಕ್ಷೆ ಸುಜಾತಾ ಚಂದ್ರಶೇಖರ್, ಮೂರ್ನಾಡು ಸರಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಕೆ.ಪಿ. ಗುರುರಾಜ್, ಟ್ರಸ್ಟ್ನÀ ಸಂಸ್ಥಾಪಕರು ಹಾಗೂ ವಿದ್ಯಾರ್ಥಿಗಳು ಇದ್ದರು.
ಮಧ್ಯಾಹ್ನ ನಂತರ ಹಾಕತ್ತೂರು ಸರಕಾರಿ ಪ್ರೌಢಶಾಲೆಯಲ್ಲಿ ಎರಡನೇ ಆವೃತ್ತಿಯ ಕಾರ್ಯಕ್ರಮ ನಡೆಸಲಾಯಿತು. ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ನೀತಾ ಕುಮಾರಿ ಬಿ.ಎಸ್., ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.