ಕುಶಾಲನಗರ, ನ.೨೩: ಕುಶಾಲನಗರ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಸಮುದಾಯ ಬಾಂಧವರಿಗೆ ತಾಲೂಕುಮಟ್ಟದ ಆಟೋಟ ಸ್ಪರ್ಧೆ ಏರ್ಪಡಿಸಲಾಗಿತ್ತು.
ಕುಶಾಲನಗರ ರಥಬೀದಿ ಯಲ್ಲಿರುವ ಸಂಘದ ಸಭಾಂಗಣದಲ್ಲಿ ಎರಡು ದಿನಗಳ ಕಾಲ ನಡೆದ ಆಟೋಟ ಸ್ಪರ್ಧೆಗೆ ಕೊಡಗು ವಿದ್ಯಾಭಿವೃದ್ಧಿ ಸಂಘದ ನಿರ್ದೇಶಕ ಜಗದೀಶ್ ಮತ್ತು ಅಶೋಕ್ ಚಾಲನೆ ನೀಡಿದರು. ಈ ಸಂದರ್ಭ ನಡೆದ ಸರಳ ಕಾರ್ಯಕ್ರಮ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕೆ.ಎಸ್.ರಾಜಶೇಖರ್ ವಹಿಸಿದ್ದರು. ಎರಡು ದಿನಗಳ ಕಾಲ ಎರಡು ದಿನಗಳ ಕಾಲ ನಡೆದ ಆಟೋಟ ಸ್ಪರ್ಧೆಗೆ ಕೊಡಗು ವಿದ್ಯಾಭಿವೃದ್ಧಿ ಸಂಘದ ನಿರ್ದೇಶಕ ಜಗದೀಶ್ ಮತ್ತು ಅಶೋಕ್ ಚಾಲನೆ ನೀಡಿದರು. ಈ ಸಂದರ್ಭ ನಡೆದ ಸರಳ ಕಾರ್ಯಕ್ರಮ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕೆ.ಎಸ್.ರಾಜಶೇಖರ್ ವಹಿಸಿದ್ದರು. ಎರಡು ದಿನಗಳ ಕಾಲ ನಡೆದ ಸ್ಪರ್ಧೆಯಲ್ಲಿ ರಂಗೋಲಿ, ಚಿನ್ನಮಣೆ, ಕೇರಂ, ಚೆಸ್, ಚೌಕಾಬಾರ, ಪಗಡೆ ಮತ್ತಿತರ ಗ್ರಾಮೀಣ ಕ್ರೀಡೆಗಳಲ್ಲಿ ಸಂಘದ ಸದಸ್ಯರು ಮತ್ತು ಕುಟುಂಬ ಸದಸ್ಯರು ಪಾಲ್ಗೊಂಡರು.
ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾದವರು ಮಡಿಕೇರಿಯಲ್ಲಿ ವಾರ್ಷಿಕೋತ್ಸವ ಸಂದರ್ಭ ನಡೆಯುವ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. ಈ ಸಂದರ್ಭ ಸಂಘದ ಕಾರ್ಯದರ್ಶಿ ಬಿ.ಎಸ್. ಅನಿಲ್, ಖಜಾಂಚಿ ಕೆ. ಶ್ರೀದೇವಿ, ವಿ. ರಾವ್, ಪ್ರಮುಖರಾದ ಜಿ.ಎಲ್. ನಾಗರಾಜ್, ಜಯಪ್ರಕಾಶ್, ರಮಾ ವಿಜಯೇಂದ್ರ, ರಜನಿ ಪ್ರದೀಪ್ ಮತ್ತಿತರರು ಇದ್ದರು.