ಮಡಿಕೇರಿ, ಜ. ೨೫: ಗಣರಾಜ್ಯೋತ್ಸವ ಪ್ರಯುಕ್ತ ಎಸ್‌ಕೆಎಸ್‌ಎಸ್‌ಎಫ್ ಸಂಘಟನೆ ವತಿಯಿಂದ ರಾಷ್ಟç ರಕ್ಷಣೆಗೆ ಸೌಹಾರ್ದತೆಯ ಸಂಕಲ್ಪ ಎಂಬ ಸಂದೇಶದೊAದಿಗೆ ಮಡಿಕೇರಿಯಲ್ಲಿ ತಾ. ೨೬ರಂದು (ಇಂದು) ಮಾನವ ಸರಪಳಿ ಮತ್ತು ಸೌಹಾರ್ದ ಜಾಥಾ ನಡೆಯಲಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಪ್ರಮುಖರು ದೇಶ ಹಾಗೂ ವಿದೇಶದ ವಿವಿಧ ಭಾಗಗಳಲ್ಲಿ ಜ.೨೬ ರಂದು ಗಣರಾಜ್ಯೋತ್ಸವ ಪ್ರಯುಕ್ತ ಮಾನವ ಸರಪಳಿ ಮತ್ತು ಸೌಹಾರ್ದ ಜಾಥಾ ಆಯೋಜಿಸಲಾಗುತ್ತಿದೆ. ಮಡಿಕೇರಿಯಲ್ಲಿ ತಾ. ೨೬ರಂದು ಸಂಜೆ ೪ ಗಂಟೆಗೆ ಗಣಪತಿ ಬೀದಿಯಲ್ಲಿರುವ ಬದ್ರಿಯಾ ಮಸೀದಿಯಿಂದ ಕಾವೇರಿ ಕಲಾಕ್ಷೇತ್ರದವರೆಗೆ ಜಾಥಾ ನಡೆಯಲಿದೆ. ನಂತರ ೧೪ನೇ ವರ್ಷದ ಬಹುಜನ ಸೌಹಾರ್ದ ಸಂಗಮ ಸಮ್ಮೇಳನವನ್ನು ಆಯೋಜಿಸಲಾಗಿದೆ. ವಿವಿಧ ಧರ್ಮಗುರುಗಳು, ರಾಜಕೀಯ ಮತ್ತು ಸಾಮಾಜಿಕ ನಾಯಕರು ಭಾಗವಹಿಸಲಿ ದ್ದಾರೆ ಎಂದು ತಿಳಿಸಿದರು.

ಎಸ್‌ಕೆಎಸ್‌ಎಸ್‌ಎಫ್ ಸಂಘಟನೆ ಯು ದೇಶ ವಿದೇಶಗಳಲ್ಲಿ ಅನಾಥರಿಗೆ, ನಿರ್ಗತಿಕರಿಗೆ, ರೋಗಿಗಳಿಗೆ ಆಶಾ ಕೇಂದ್ರವಾಗಿ ಕಾರ್ಯಾಚರಿಸುತ್ತಿದೆ. ಯುವ ಜನತೆಯನ್ನು “ಜ್ಞಾನ ವಿನಯ ಸೇವೆ” ಎಂಬ ಧ್ಯೇಯವಾಕ್ಯದಲ್ಲಿ ಮುನ್ನಡೆಸಲಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ಸುಮಾರು ೪೦ ಕ್ಕೂ ಅಧಿಕ ಶಾಖೆಗಳನ್ನು ಹೊಂದಿದೆ ಎಂದು ಮಾಹಿತಿ ನೀಡಿದರು. ಗೋಷ್ಠಿಯಲ್ಲಿ ಎಸ್‌ಕೆಎಸ್‌ಎಸ್‌ಎಫ್ ಜಿಲ್ಲಾಧ್ಯಕ್ಷ ಎಂ. ತಮ್ಲಿಕ್ ಧಾರಿಮಿ, ಸಂಚಾಲಕ ಅಬ್ದುಲ್ ಕರೀಂ ಮುಸ್ಲಿಯಾರ್ ಸಿದ್ದಾಪುರ, ಉಪಾಧ್ಯಕ್ಷ ಉಮ್ಮರ್ ಮುಸ್ಲಿಯಾರ್ ನಲ್ವತ್ತೆಕ್ಕರೆ, ಸದಸ್ಯರುಗಳಾದ ಆರಿಫ್ ಫೈಝಿ ಒಂಟಿಯAಗಡಿ ಹಾಗೂ ಶರಪುದ್ದೀನ್ ಸಿದ್ದಾಪುರ ಉಪಸ್ಥಿತರಿದ್ದರು.