ಕುಶಾಲನಗರ, ಮಾ. ೧೭: ಗೋಣಿಕೊಪ್ಪದಲ್ಲಿ ಬಿಜೆಪಿ ವತಿಯಿಂದ ನಡೆದ ವಿಜಯ ಸಂಕಲ್ಪ ಯಾತ್ರೆಯ ಸಂದರ್ಭ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನಿಸಿದ ಆರೋಪದ ಹಿನ್ನೆಲೆ ಕಾಂಗ್ರೆಸ್ ಪಕ್ಷದ ವತಿಯಿಂದ ಕುಶಾಲನಗರದಲ್ಲಿ ಪ್ರತಿಭಟನಾ ಪ್ರದರ್ಶನ ನಡೆಯಿತು.
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ಅವರ ನೇತೃತ್ವದಲ್ಲಿ ಪಟ್ಟಣದ ಗಣಪತಿ ದೇವಾಲಯ ಮುಂಭಾಗ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.