ಮಡಿಕೇರಿ, ಮಾ. ೧೮: ಕೊಡಗಿನಲ್ಲಿ ಕಳೆದ ೨೫ ವರ್ಷಗಳಿಂದ ಬಿಜೆಪಿಯನ್ನು ಸಹಿಸಿದ್ದು ಸಾಕು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್. ಚಂದ್ರಮೌಳಿ ಕರೆ ನೀಡಿದ್ದಾರೆ.
ಮಡಿಕೇರಿ ನಗರದ ವಿವಿಧೆಡೆ ವಿವಿಧ ಭರವಸೆಗಳ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆಯ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ವಿನೂತನ ಯೋಜನೆಗಳ ಮೂಲಕ ಬಡವರ ಹಾಗೂ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವ ಕೆಲಸವನ್ನು ಕಾಂಗ್ರೆಸ್ ಮಾಡಲಿದೆ ಎಂದರು.
ಕಾAಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ “ಗೃಹಜ್ಯೋತಿ” ಯೋಜನೆಯಡಿ ಪ್ರತಿ ಮನೆಗೆ ೨೦೦ ಯೂನಿಟ್ ಉಚಿತ ವಿದ್ಯುತ್ ಪೂರೈಕೆ, ಪ್ರತಿ ಮನೆಯೊಡತಿಗೆ ರೂ. ೨ ಸಾವಿರ ಪ್ರೋತ್ಸಾಹ ಧನ ನೀಡಲು ‘ಗೃಹಲಕ್ಷಿ÷್ಮ’ ಯೋಜನೆ ಜಾರಿ ಮತ್ತು ಅನ್ನಭಾಗ್ಯ ಯೋಜನೆ ಮೂಲಕ ಬಿಪಿಎಲ್ ಕಾರ್ಡ್ದಾರರಿಗೆ ೧೦ ಕೆ.ಜಿ. ಅಕ್ಕಿ ಉಚಿತವಾಗಿ ನೀಡುವ ಯೋಜನೆ ರಾಜ್ಯದಲ್ಲಿ ಜಾರಿಗೆ ಬರಲಿದೆ. ಈ ಯೋಜನೆ ದೇಶದಲ್ಲೇ ಮೊದಲು ಎಂದು ತಿಳಿಸಿದರು.
ಗ್ಯಾರಂಟಿ ಕಾರ್ಡ್ ಅಭಿಯಾನದ ನೇತೃತ್ವ ವಹಿಸಿದ್ದ ಕಾಂಗ್ರೆಸ್ ನಗರಾಧ್ಯಕ್ಷ ಬಿ.ವೈ. ರಾಜೇಶ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ಹಂಸ, ಮಾಜಿ ಅಧ್ಯಕ್ಷ ಕೆ.ಯು. ಅಬ್ದುಲ್ ರಜಾಕ್ ಹಾಗೂ ವಕ್ತಾರ ತೆನ್ನಿರ ಮೈನಾ ಮಾತನಾಡಿ ಮನೆ ಮನೆಗಳಿಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ನೀಡಲಾಗುತ್ತಿದ್ದು, ಜನರಿಂದ ಉತ್ತಮ ಸ್ಪಂದನ ದೊರೆತ್ತದೆ ಎಂದರು.
ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಮುಖರಾದ ಟಿ.ಎಂ. ಅಯ್ಯಪ್ಪ, ಕಾವೇರಮ್ಮ ಸೋಮಣ್ಣ, ಚುಮ್ಮಿ ದೇವಯ್ಯ, ಮಹಿಳಾ ಘಟಕದ ಅಧ್ಯಕ್ಷೆ ಸುರಯ್ಯ ಅಬ್ರಾರ್, ಜಪ್ರುಲ್ಲ, ಮಿನಾಜ್ ಪ್ರವೀಣ್, ಫ್ಯಾನ್ಸಿ ಬೆಳ್ಯಪ್ಪ, ಪ್ರೇಮ ಕೃಷ್ಣಪ್ಪ ಪ್ರಕಾಶ್ ಆಚಾರ್ಯ, ಸ್ವರ್ಣಲತಾ, ಮುಮ್ತಾಜ್ ಬೇಗ್, ಪ್ರೇಮ ಹೆಚ್.ಕೆ, ಬೂತ್ ಅಧ್ಯಕ್ಷರಾದ ರಾವುಫ್, ಹಫೀಜ್, ಮುದ್ದುರಾಜ್, ದಿವ್ಯಾ, ಹಮೀದ್, ಸುದಯ್ ನಾಣಯ್ಯ, ಹಜೀಜ್, ಹಬೀಬ್, ರಿಯಾ ಸುದ್ದಿನ್ ನಗರ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಆರ್.ಪಿ. ಮತ್ತಿತರು ಹಾಜರಿದ್ದರು.
ನಗರದ ಮಲ್ಲಿಕಾರ್ಜುನ ನಗರ, ಭಗವತಿ ನಗರ ಮತ್ತಿತರ ಬಡಾವಣೆ ಗಳಲ್ಲಿ ಕಾಂಗ್ರೆಸ್ ಪ್ರಮುಖರು ಗ್ಯಾರಂಟಿ ಕಾರ್ಡ್ ವಿತರಿಸಿದರು.