ನರೇಂದ್ರ ಮೋದಿ ರೋಡ್ ಶೋ ಮಾಡಲು ಕಾಂಗ್ರೆಸ್ ಆಹ್ವಾನ
ಬೆಂಗಳೂರು, ಮಾ. ೧೮: ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ಬೆಂಗಳೂರು-ಮೈಸೂರು ರಾಷ್ಟಿçÃಯ ಹೆದ್ದಾರಿ ಶುಕ್ರವಾರ ರಾತ್ರಿ ಮಳೆ ನೀರಿನಿಂದ ತುಂಬಿದ್ದರಿAದ ವಾಹನ ಸವಾರರು ಪರದಾಡುವಂತಾಯಿತು. ಈ ಕುರಿತ ವಿಡಿಯೋವೊಂದನ್ನು ಟ್ವಿಟರ್‌ನಲ್ಲಿ ಹಂಚಿಕೊAಡಿರುವ ಕಾಂಗ್ರೆಸ್, ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಕಳೆದ ವರ್ಷವೇ ಈ ಹೆದ್ದಾರಿ ಮಳೆಯಿಂದ ಮುಳುಗಿತ್ತು. ಈಗ ಮತ್ತೊಮ್ಮೆ ಸಣ್ಣ ಮಳೆಗೆ ಅವಾಂತರ ಸೃಷ್ಟಿಯಾಗಿದೆ ಎಂದರೆ ಇದು ಅವೈಜ್ಞಾನಿಕವಾಗಿರುವ ಬಿಜೆಪಿ ಭ್ರಷ್ಟಪಥ ಅಲ್ಲವೇ ಎಂದು ಪ್ರಶ್ನಿಸಿದೆ. ನರೇಂದ್ರ ಮೋದಿ ಅವರು ಈಗ ಬಂದು ರೋಡ್ ಶೋ ಮಾಡಬೇಕೆಂದು ಆಹ್ವಾನಿಸಿದೆ. ಕಾರಿನಲ್ಲಿ ರೋಡ್ ಶೋ ಮಾಡುವರೋ, ಬೋಟಿನಲ್ಲಿ ಮಾಡುವರೋ ಅವರೇ ನಿರ್ಧರಿಸಲಿ! ಎಂದು ವ್ಯಂಗ್ಯವಾಡಿದೆ.
ಅದೃಷ್ಟದ ಸಾಲಿಗ್ರಾಮ ಎಂದು ನಕಲಿ ಕಲ್ಲನ್ನು ಮಾರಲು ಯತ್ನಿಸಿದವರ ಬಂಧನ
ಬೆAಗಳೂರು, ಮಾ. ೧೮: ರಾಜಾಜಿನಗರದಲ್ಲಿ ನಕಲಿ ಸಾಲಿಗ್ರಾಮ ಕಲ್ಲುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮನೋಜ್, (೫೭) ಮತ್ತು ಆದಿತ್ಯ ಸಾಗರ್ ಜವಾಲ್ಕರ್ (೩೭) ಬಂಧಿತ ಆರೋಪಿಗಳು. ಈ ಕಲ್ಲುಗಳನ್ನು ಉತ್ತರ ಪ್ರದೇಶದ ಗೋಮತಿ ನದಿಯಿಂದ ತರಲಾಗಿದೆ ಎಂದು ಖರೀದಿದಾರರಿಗೆ ತಿಳಿಸಿದ್ದರು. ಮಹಾರಾಷ್ಟç ಮೂಲದ ಮನೋಜ್ ಹಾಗೂ ಆದಿತ್ಯ ಸಾಗರ್ ಗೋಮತಿ ನದಿಯಿಂದ ತಂದ ಕಲ್ಲನ್ನು ನಿಜವಾದ ಸಾಲಿಗ್ರಾಮ ಎಂದು ನಂಬಿಸಿ ಎರಡು ಕೋಟಿಗೆ ವ್ಯಕ್ತಿಯೊಬ್ಬರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದರು. ಖಚಿತ ಮಾಹಿತಿ ಸಂಗ್ರಹಿಸಿದ ಸಿಸಿಬಿ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿದ್ದಾರೆ. ಸಿಸಿಬಿ ಪೊಲೀಸರು ಆರೋಪಿಗಳ ವಿರುದ್ಧ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕೋಲಾರದಿಂದ ಹಿಂದೆ ಸರಿದು ವರುಣಾದಲ್ಲಿ ಸಿದ್ದರಾಮಯ್ಯ ಸ್ಪರ್ಧೆ!
ನವದೆಹಲಿ, ಮಾ. ೧೮: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದು ಸದ್ಯ ಬಹುಚರ್ಚಿತ ವಿಷಯ. ಅವರ ಕ್ಷೇತ್ರ ಆಯ್ಕೆ ಗೊಂದಲ ಮುಂದುವರಿದಿದೆ. ಕಳೆದ ಬಾರಿ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದುಬಂದಿದ್ದ ಸಿದ್ದರಾಮಯ್ಯ ಈ ಬಾರಿ ಅಲ್ಲಿ ಸ್ಪರ್ಧಿಸುತ್ತಿಲ್ಲ. ಚಿನ್ನದ ಗಣಿನಾಡು ಕೋಲಾರಕ್ಕೆ ಹೋಗುತ್ತೇನೆ ಎಂದು ಈ ಹಿಂದೆ ಸಿದ್ದರಾಮಯ್ಯ ಪ್ರಕಟಿಸಿದ್ದರು. ಕ್ಷೇತ್ರದಲ್ಲಿ ಓಡಾಡುತ್ತಿದ್ದರು. ಆದರೆ ಇತ್ತೀಚೆಗೆ ಬಂದಿರುವ ಹೊಸ ಮಾಹಿತಿ ಕೋಲಾರ ಕ್ಷೇತ್ರದ ಸ್ಪರ್ಧಾಕಣದಿಂದ ಸಿದ್ದರಾಮಯ್ಯ ಹಿಂದೆ ಸರಿದು ತಮ್ಮ ಆರಂಭದ ವರುಣಾ ಕ್ಷೇತ್ರಕ್ಕೆ ಹೋಗುತ್ತಿದ್ದಾರೆ ಎಂಬುದು. ಕೋಲಾರ ಕ್ಷೇತ್ರ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ರಾಹುಲ್ ಗಾಂಧಿ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ನಿನ್ನೆ ದೆಹಲಿಯಲ್ಲಿ ನಡೆದ ಸಿಇಸಿ ಸಭೆಯಲ್ಲಿ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯರಿಗೆ ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ಹಾಗೂ ಕೋಲಾರದಿಂದ ಹಿಂದೆ ಸರಿಯುವಂತೆ ಸಲಹೆ ನೀಡಿದ್ದಾರೆ ಸಿದ್ದರಾಮಯ್ಯ ಜೊತೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದ ರಾಹುಲ್; ಕೋಲಾರ ಕ್ಷೇತ್ರದ ವರದಿಗಳು ನಿಮಗೆ ಸೂಕ್ತ ಎನಿಸುತ್ತಿಲ್ಲ, ಇನ್ನೊಮ್ಮೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಿ ಎಂದಿದ್ದರು.