ಸೋಮವಾರಪೇಟೆ, ಮಾ. ೧೮: ಇಲ್ಲಿನ ತಾಲೂಕು ಕಚೇರಿಯಲ್ಲಿ ಸಾರ್ವಜನಿಕ ಕೆಲಸ ಕಾರ್ಯಗಳಿಗೆ ಅನಗತ್ಯ ವಿಳಂಬ ಮಾಡಲಾಗುತ್ತಿದೆ. ಕಡತಗಳ ವಿಲೇವಾರಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ ತಾ. ೨೦ರಂದು ಜೆಡಿಎಸ್ ಪಕ್ಷದಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಮುಖಂಡರಾದ ಹೊಸಬೀಡು ಹೂವಯ್ಯ ತಿಳಿಸಿದ್ದಾರೆ.

ಪೋಡಿ ದುರಸ್ತಿಯಲ್ಲಿ ವಿಳಂಬ, ಅಕ್ರಮ ಸಕ್ರಮದಲ್ಲಿ ಅರ್ಜಿಗಳ ವಿಲೇವಾರಿಗೆ ಮೀನಾಮೇಷ, ಸರ್ವೆ ಇಲಾಖೆಯಲ್ಲಿನ ಭ್ರಷ್ಟಾಚಾರ ಸೇರಿದಂತೆ ಅಧಿಕಾರಿಗಳು ಹಾಗೂ ಆಡಳಿತ ಪಕ್ಷದ ವೈಫಲ್ಯ ಖಂಡಿಸಿ ಪ್ರತಿಭಟನೆ ನಡೆಯಲಿದೆ. ಅಂದು ಬೆಳಿಗ್ಗೆ ೧೦.೩೦ ಗಂಟೆಗೆ ವಿವೇಕಾನಂದ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಬಳಿಕ ಜೇಸೀ ವೇದಿಕೆ ಯಲ್ಲಿ ಬಹಿರಂಗ ಸಭೆ ಏರ್ಪಡಿಸ ಲಾಗಿದೆ. ಪಕ್ಷದ ಮುಖಂಡರಾದ ನಾಪಂಡ ಮುತ್ತಪ್ಪ, ಕ್ಷೇತ್ರ ಸಮಿತಿ ಅಧ್ಯಕ್ಷ ಹೆಚ್.ಆರ್. ಸುರೇಶ್, ಕೆ.ಟಿ. ಪರಮೇಶ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.