ಸೋಮವಾರಪೇಟೆ, ಮಾ. ೧೮ : ಇಲ್ಲಿನ ಲಯನ್ಸ್ ಇಂಟರ್‌ನ್ಯಾಷನಲ್ ಸಂಸ್ಥೆಗೆ ೩೧೭ ಡಿ. ಜಿಲ್ಲಾ ಗವರ್ನರ್ ಸಂಜೀತ್ ಶೆಟ್ಟಿ ಅವರು ತಾ. ೨೧ರಂದು ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ಸಂಸ್ಥೆಯ ಕಾರ್ಯದರ್ಶಿ ಕೆ.ಎನ್. ತೇಜಸ್ವಿ ತಿಳಿಸಿದ್ದಾರೆ.

ಒಕ್ಕಲಿಗರ ಸಮುದಾಯ ಭವನದಲ್ಲಿ ಅಂದು ಸಂಜೆ ೭ ಗಂಟೆಗೆ ಸಂಸ್ಥೆಯ ಅಧ್ಯಕ್ಷ ಸಿ.ಕೆ. ರೋಹಿತ್ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಇದಕ್ಕೂ ಮುನ್ನ ಸಂಜೆ ೫.೩೦ಕ್ಕೆ ನಗರೂರು ಗ್ರಾಮದಲ್ಲಿ ನಿರ್ಮಿಸಿರುವ ಬಸ್ ತಂಗುದಾಣ ಮತ್ತು ಸ್ವಾಗತ ಫಲಕವನ್ನು ಅನಾವರಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.