ಮಡಿಕೇರಿ, ಮಾ. ೧೯: ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ದರೂ ಕೊಡಗಿನಲ್ಲಿ ಅಭಿವೃದ್ಧಿ ಮರೀಚಿಕೆಯಾಗಿದೆ. ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ವಿರುದ್ಧ ಜನರು ಕಾಂಗ್ರೆಸ್ ಪಕ್ಷಕ್ಕೆ ದಿಗ್ವಿಜಯ ನೀಡಲು ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಪ್ರತಿ ಬೂತ್‌ನಲ್ಲಿಯೂ ಮತದಾರ ಬದಲಾವಣೆ ಬಯಸಿರುವುದು ಕಂಡು ಬಂದಿದೆ ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ವಕ್ತಾರ ಮೇರಿಯಂಡ ಸಂಕೇತ್ ಪೂವಯ್ಯ ಅಭಿಪ್ರಾಯಪಟ್ಟರು.

ಮಡಿಕೇರಿಯ ಪತ್ರಿಕಾ ಭವನದಲ್ಲಿ ಆಯೋಜನೆಗೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಸರ್ಕಾರದ ವಿರುದ್ದ ಮಾತನಾಡಿದ ಅವರು ಗ್ರಾಮ ಪಂಚಾಯಿತಿಯಿAದ ಪಾರ್ಲಿಮೆಂಟಿನ ತನಕ ಬಿಜೆಪಿಯ ಸರ್ಕಾರವಿದ್ದರೂ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಸಾಧನೆ ಆಗಲಿಲ್ಲ. ಕೊಡಗಿನಲ್ಲಿ ಕಾಫಿ ಬೆಳೆಗಾರರ ಸಮಸ್ಯೆಗೆ ಇನ್ನೂ ಕೂಡ ಪರಿಹಾರ ಲಭಿಸಿಲ್ಲ. ಆನೆ ಮಾನವ ಸಂಘರ್ಷ ತಡೆಯಲು ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ಪ್ರಮುಖವಾಗಿ ಅರಣ್ಯ ಮಂತ್ರಿಯೇ ಸರ್ಕಾರದಲ್ಲಿ ಇಲ್ಲದಂತಾಗಿದೆ. ಕೊಡಗಿನ ಶಾಸಕರನ್ನು ಮಂತ್ರಿ ಮಾಡಲು ಪ್ರಯತ್ನವೇ ಮಾಡಲಿಲ್ಲ. ನಾಲ್ಕೆöÊದು ಬಾರಿ ಆರಿಸಿ ಬಂದಿದ್ದರೂ ಕೊಡಗಿನ ಶಾಸಕರ ಬಗ್ಗೆ ಬಿಜೆಪಿ ಸರ್ಕಾರಕ್ಕೆ ವಿಶ್ವಾಸವಿಲ್ಲದಂತಾಗಿದೆ. ಹುಲಿ ದಾಳಿಯಿಂದ ೨ ಅಮೂಲ್ಯ ಜೀವಗಳು ಬಲಿಯಾಗಿದ್ದರೂ ಇಲ್ಲಿನ ಉಸ್ತುವಾರಿ ಸಚಿವರು ಕುಟುಂಬವನ್ನು ಮಾತನಾಡಿಸುವ ಪ್ರಯತ್ನವನ್ನೇ ಮಾಡಿಲ್ಲ. ಕಾಫಿ ಗಿಡವನ್ನು ಕಾಡಾನೆಗಳು ಬುಡ ಸಹಿತ ಕಿತ್ತು ಹಾಳು ಮಾಡುತ್ತಿದೆ. ಈ ವಿಚಾರದಲ್ಲಿ ಇಲ್ಲಿನ ಬೆಳೆಗಾರ ಕಂಗಾಲಾಗಿದ್ದರೂ ವೈಜ್ಞಾನಿಕ ರೀತಿಯಲ್ಲಿ ಪರಿಹಾರ ಕೊಡಿಸುವಲ್ಲಿ ಇಲ್ಲಿನ ಜನಪ್ರತಿನಿಧಿಗಳು ಹಾಗೂ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದರು.

ಕೊಡಗು ಜಿಲ್ಲಾ ಕಾಂಗ್ರೆಸ್‌ನ ಮಹಿಳಾ ಅಧ್ಯಕ್ಷೆ ಸುರಯ್ಯ ಅಬ್ರಾರ್ ಮಾತನಾಡಿ, ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವು ಸ್ಥಾನಮಾನಗಳನ್ನು ನೀಡಿ ಗೌರವಯುತವಾಗಿ ನಡೆಸಿಕೊಂಡಿದೆ. ಆದರೆ ಬಿಜೆಪಿಯಲ್ಲಿರುವ ಮಹಿಳೆಯರಿಗೆ ಅವಕಾಶವನ್ನೇ ನೀಡಿಲ್ಲ ಎಂದು ಆರೋಪಿಸಿದರು.

ಬಿಜೆಪಿಯು ಕೊಡಗಿಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದ್ದರೂ ಯಾವುದೂ ಜಾರಿ ಆಗಲಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಆಪಟ್ಟೀರ ಟಾಟು ಮೊಣ್ಣಪ್ಪ ಆರೋಪಿಸಿದರು.

ಪರಿಶಿಷ್ಟ ಜಾತಿಯ ಜಿಲ್ಲಾಧ್ಯಕ್ಷ ಬಿ.ಇ. ಜಯೇಂದ್ರ ಮಾತನಾಡಿ, ಗೋಣಿಕೊಪ್ಪ ನಗರದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನವಾಗಿದೆ. ಇದನ್ನು ತೀವ್ರವಾಗಿ ಖಂಡಿಸುತ್ತೇವೆ. ಈ ಬಗ್ಗೆ ಬಿಜೆಪಿಯವರು ಸ್ಪಷ್ಟೀಕರಣ ನೀಡಬೇಕು ಎಂದರು.

ಕಾAಗ್ರೆಸ್ ಪರವಾಗಿ ಜಿಲ್ಲೆಯಲ್ಲಿ ಹೊಸ ಅಲೆ ಬೀಸುತ್ತಿವೆ ಎಂಬುದಕ್ಕೆ ಇತ್ತೀಚೆಗೆ ನಿಟ್ಟೂರಿನಲ್ಲಿ ನಡೆದ ಪಂಚಾಯಿತಿ ಬೈ ಎಲೆಕ್ಷನ್ ಉದಾಹರಣೆಯಾಗಿದೆ ಎಂದು ಕಾಂಗ್ರೆಸ್‌ನ ಕೊಲ್ಯದ ಗಿರೀಶ್ ತಿಳಿಸಿದರು.