ಕೊಡ್ಲಿಪೇಟೆ, ಮಾ. ೧೯: ಗೋಣಿಕೊಪ್ಪಲಿನಲ್ಲಿ ಬಿಜೆಪಿ ವತಿಯಿಂದ ನಡೆದ ಕಾರ್ಯಕ್ರಮದ ಪ್ರಚಾರಾರ್ಥ ಅಳವಡಿಸಿದ ಫಲಕಗಳಿಂದ ಸಂವಿಧಾನ ಶಿಲ್ಪಿಗೆ ಅಪಮಾನ ಮಾಡಿದಂತಾಗಿದೆ. ಈ ಹಿನ್ನೆಲೆ ಆಯೋಜಕರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ತಾಲೂಕು ದಲಿತ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.

ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರದ ಮೇಲೆ ಬಿಜೆಪಿ ನಾಯಕರ ಕಟೌಟ್‌ಗಳನ್ನು ಅಳವಡಿಸಲಾಗಿದೆ. ಪಾದರಕ್ಷೆಯ ಸ್ಥಳದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರವಿದ್ದು, ಉದ್ದೇಶಪೂರ್ವಕವಾಗಿ ಕೃತ್ಯ ನಡೆಸಲಾಗಿದೆ ಎಂದು ಆರೋಪಿಸಿರುವ ಒಕ್ಕೂಟದ ಅಧ್ಯಕ್ಷ ಜೆ.ಎಲ್. ಜನಾರ್ದನ್, ತಕ್ಷಣ ಪೊಲೀಸರು ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.