ಕೂಡಿಗೆ, ಮಾ. ೨೦: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾವೇರಿ ನದಿ ದಂಡೆಯ ಸಮೀಪದ ಕಣಿವೆ ಗ್ರಾಮದಲ್ಲಿರುವ ಐತಿಹಾಸಿಕ ಹಿನ್ನೆಲೆಯುಳ್ಳ ಕಣಿವೆಯ ಶ್ರೀ ರಾಮಲಿಂಗೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವವು ತಾ. ೨೮ ರಿಂದ ೩೦ರವರೆಗೆ ನಡೆಯಲಿದೆ.
ಬ್ರಹ್ಮ ರಥೋತ್ಸವದ ಅಂಗವಾಗಿ ತಾ. ೨೮ ರಿಂದ ವಿಶೇಷ ಪೂಜೆಗಳೊಂದಿಗೆ ಪ್ರಾರಂಭ ವಾಗುವುದು. ತಾ. ೨೮ ರಂದು ದೇವಾನಾಂದಿ, ಅಂಕುರಾರ್ಪಣ, ರಕ್ಷಾಬಂಧನ, ಧ್ವಜಾರೋಹಣ, ನವಗ್ರಹ ಸ್ಥಾಪನೆ, ಜಪ, ಅಭಿಷೇಕ ಸೇರಿದಂತೆ ಪುಣ್ಯಾಹವಾಚನ, ಗಣಪತಿ ಹೋಮ, ದೇವತಾಹ್ವಾನ, ಮಹಾಪೂಜೆ ನಡೆಯಲಿವೆ. ಅದೇ ರೀತಿಯಲ್ಲಿ ತಾ. ೨೯ ರಂದು ಮಹಾನ್ಯಾಸ ಪೂರ್ವಕ ರುದ್ರಾಭಿಷೇಕ, ನವಗ್ರಹ, ಗಣಪತಿ ಹೋಮ, ಮೃತ್ಯುಂಜಯ ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿವೆ. ಸಂಜೆ ೭ ಗಂಟೆಗೆ ಸೀತಾ ಕಲ್ಯಾಣೋತ್ಸವ ನಡೆಯಲಿದೆ.
ತಾ. ೩೦ ರಂದು ಪವಿತ್ರ ಗಂಗೋದಕರಿAದ ಶ್ರೀ ಸ್ವಾಮಿಗೆ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಮಹಾಪೂಜೆ ನಡೆದ ನಂತರ ಅಭಿಜಿನ್ ಮುಹೂರ್ತದಲ್ಲಿ ಶ್ರೀ ರಾಮಲಿಂಗೇಶ್ವರ ಸ್ವಾಮಿಯ ರಥಾರೋಹಣ, ರಥಬಲಿಯ ನಂತರ ಬ್ರಹ್ಮರಥೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀ ರಾಮಲಿಂಗೇಶ್ವರ ಸ್ವಾಮಿ ದೇವಾಲಯ ಸಮಿತಿಯ ಅಧ್ಯಕ್ಷ ಕೆ.ಎನ್. ಸುರೇಶ್ ತಿಳಿಸಿದ್ದಾರೆ.