ಮಡಿಕೇರಿ, ಮೇ ೨೪: ನಗರದ ಸುದರ್ಶನ ವೃತ್ತದ ಬಳಿ ಸಿದ್ದಾಪುರ ಕಡೆಗೆ ತೆರಳುವ ರಸ್ತೆಯ ಬಸ್ ನಿಲ್ದಾಣದ ಸಮೀಪ ಪಿ ಪ್ರದೀಪ್ ಕುಮಾರ್ ಎಂಬಾತ ಸರ್ಕಾರದ ಪರವಾನಗಿ ಇಲ್ಲದೆ ಅಕ್ರಮವಾಗಿ ಆನೆ ದಂತದAತಿರುವ ವಸ್ತುವಿನಿಂದ ಹಸಿರು ಮತ್ತು ಗುಲಾಬಿ ಬಣ್ಣದ ಹರಳು ಕಲ್ಲಿನಿಂದ ಮಾಡಿರುವ ಎರಡು ಖಡ್ಗ ( ಕೈ ಬಳೆ) ಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾಗ ಅರಣ್ಯ ಸಂಚಾರಿದಳ ಆತನನ್ನು ಬಂಧಿಸಿದೆ.

ಕಾರ್ಯಾಚರಣೆಯಲ್ಲಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಕೆ.ವಿ. ಶರತ್‌ಚಂದ್ರ ನಿರ್ದೇಶನದ ಮೇರೆಗೆ ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕರಾದ ಕೆ.ಬಿ.ವಿಶ್ವನಾಥ್ ಮಾರ್ಗದರ್ಶನದಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಪಿ.ಎಸ್.ಐ ಸಿ.ಯು ಸವಿ, ಹೆಡ್‌ಕಾನ್ಸ್ಟೇಬಲ್‌ಗಳಾದ ಶೇಖರ್, ರಾಘವೇಂದ್ರ, ಯೋಗೇಶ್, ಉಮೇಶ್ ಮತ್ತು ಕಾನ್ಸ್ಟೇಬಲ್‌ಗಳಾದ ಸ್ವಾಮಿ, ಮಂಜುನಾಥ ಪಾಲ್ಗೊಂಡಿದ್ದರು.