ಸೋಮವಾರಪೇಟೆ, ಮೇ ೨೫: ಇಲ್ಲಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿರುವ ಹೆಚ್ಚಿನ ಕಾಮಗಾರಿಗಳು ಕಳಪೆಯಾಗಿವೆ. ಇದರೊಂದಿಗೆ ಕೆಲವೊಂದು ಕಾಮಗಾರಿಗಳನ್ನು ಪೂರ್ಣಗೊಳಿಸದೇ ಹಣ ಪಾವತಿಸಿರುವ ಬಗ್ಗೆ ಹಲವು ದೂರುಗಳಿದ್ದು, ಈ ಬಗ್ಗೆ ತನಿಖೆಗೆ ಒತ್ತಾಯಿಸಿ ಲೋಕಾಯುಕ್ತಕ್ಕೆ ದೂರು ನೀಡಲಾಗುವುದು ಎಂದು ನಗರ ಕಾಂಗ್ರೆಸ್ ಪದಾಧಿಕಾರಿಗಳು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ನಾಗರಾಜು, ಮಾಹಿತಿ ಹಕ್ಕಿನಲ್ಲಿ ಕಾಮಗಾರಿಗಳ ವಿವರಗಳನ್ನು ಕೇಳಲಾಗಿದೆ. ಸರಿಯಾದ ಮಾಹಿತಿ ನೀಡದಿದ್ದರೆ ಅಧಿಕಾರಿಗಳು ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕಾಮಗಾರಿ ನಡೆಯದೆ ಬಿಲ್ ಮಾಡಿರುವ ಬಗ್ಗೆಯೂ ದೂರಿದ್ದು, ಈ ಬಗ್ಗೆಯೂ ಲೋಕಾಯುಕ್ತ ದೂರಿನಲ್ಲಿ ಪ್ರಸ್ತಾಪಿಸಲಾಗುವುದು ಎಂದರು.
ಪಟ್ಟಣದಲ್ಲಿ ಇಂದಿರಾ ಕ್ಯಾಂಟಿನ್ ತೆರೆಯಲು ಬಿಜೆಪಿ ಆಡಳಿತ ಅಡ್ಡಗಾಲು ಹಾಕಿದ ಪರಿಣಾಮ ಬಡವರು ಸರ್ಕಾರದ ಸೌಲಭ್ಯದಿಂದ ವಂಚಿತರಾಗಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಇಂದಿರಾ ಕ್ಯಾಂಟಿನ್ ತೆರೆಯಲು ಶಾಸಕರಿಗೆ ಮನವಿ ಸಲ್ಲಿಸಲಾಗಿದೆ ಎಂದರು. ಹೈಟೆಕ್ ಮಾರುಕಟ್ಟೆ ದುರಸ್ತಿ ಹೆಸರಿನಲ್ಲಿ ಪ್ರತಿವರ್ಷ ಹಣ ವ್ಯಯ ಮಾಡಲಾಗುತ್ತಿದೆ. ಅಡಿಭಾಗದಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ, ಮೊದಲ ಅಂತಸ್ತಿನಲ್ಲಿ ಮಾರುಕಟ್ಟೆಗೆ ವ್ಯವಸ್ಥೆ ಮಾಡಬೇಕು. ಈ ಬಗ್ಗೆ ಶಾಸಕರೊಂದಿಗೆ ಚರ್ಚಿಸಲಾಗುವುದು. ಶತಮಾನೋತ್ಸವ ಭವನ ಮುಂದುವರಿದ ಕಾಮಗಾರಿಗೆ ಅನುದಾನ ಕಲ್ಪಿಸುವುದು ಹಾಗೂ ಕಸವಿಲೇವಾರಿಗೆ ಸೂಕ್ತ ಕ್ರಮಕೈಗೊಳ್ಳುವ ಬಗ್ಗೆ ಶಾಸಕರಿಗೆ ಮನವಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಪಟ್ಟಣದ ಸರ್ಕಾರಿ ಸೋಮವಾರಪೇಟೆ, ಮೇ ೨೫: ಇಲ್ಲಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿರುವ ಹೆಚ್ಚಿನ ಕಾಮಗಾರಿಗಳು ಕಳಪೆಯಾಗಿವೆ. ಇದರೊಂದಿಗೆ ಕೆಲವೊಂದು ಕಾಮಗಾರಿಗಳನ್ನು ಪೂರ್ಣಗೊಳಿಸದೇ ಹಣ ಪಾವತಿಸಿರುವ ಬಗ್ಗೆ ಹಲವು ದೂರುಗಳಿದ್ದು, ಈ ಬಗ್ಗೆ ತನಿಖೆಗೆ ಒತ್ತಾಯಿಸಿ ಲೋಕಾಯುಕ್ತಕ್ಕೆ ದೂರು ನೀಡಲಾಗುವುದು ಎಂದು ನಗರ ಕಾಂಗ್ರೆಸ್ ಪದಾಧಿಕಾರಿಗಳು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ನಾಗರಾಜು, ಮಾಹಿತಿ ಹಕ್ಕಿನಲ್ಲಿ ಕಾಮಗಾರಿಗಳ ವಿವರಗಳನ್ನು ಕೇಳಲಾಗಿದೆ. ಸರಿಯಾದ ಮಾಹಿತಿ ನೀಡದಿದ್ದರೆ ಅಧಿಕಾರಿಗಳು ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕಾಮಗಾರಿ ನಡೆಯದೆ ಬಿಲ್ ಮಾಡಿರುವ ಬಗ್ಗೆಯೂ ದೂರಿದ್ದು, ಈ ಬಗ್ಗೆಯೂ ಲೋಕಾಯುಕ್ತ ದೂರಿನಲ್ಲಿ ಪ್ರಸ್ತಾಪಿಸಲಾಗುವುದು ಎಂದರು.
ಪಟ್ಟಣದಲ್ಲಿ ಇಂದಿರಾ ಕ್ಯಾಂಟಿನ್ ತೆರೆಯಲು ಬಿಜೆಪಿ ಆಡಳಿತ ಅಡ್ಡಗಾಲು ಹಾಕಿದ ಪರಿಣಾಮ ಬಡವರು ಸರ್ಕಾರದ ಸೌಲಭ್ಯದಿಂದ ವಂಚಿತರಾಗಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಇಂದಿರಾ ಕ್ಯಾಂಟಿನ್ ತೆರೆಯಲು ಶಾಸಕರಿಗೆ ಮನವಿ ಸಲ್ಲಿಸಲಾಗಿದೆ ಎಂದರು. ಹೈಟೆಕ್ ಮಾರುಕಟ್ಟೆ ದುರಸ್ತಿ ಹೆಸರಿನಲ್ಲಿ ಪ್ರತಿವರ್ಷ ಹಣ ವ್ಯಯ ಮಾಡಲಾಗುತ್ತಿದೆ. ಅಡಿಭಾಗದಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ, ಮೊದಲ ಅಂತಸ್ತಿನಲ್ಲಿ ಮಾರುಕಟ್ಟೆಗೆ ವ್ಯವಸ್ಥೆ ಮಾಡಬೇಕು. ಈ ಬಗ್ಗೆ ಶಾಸಕರೊಂದಿಗೆ ಚರ್ಚಿಸಲಾಗುವುದು. ಶತಮಾನೋತ್ಸವ ಭವನ ಮುಂದುವರಿದ ಕಾಮಗಾರಿಗೆ ಅನುದಾನ ಕಲ್ಪಿಸುವುದು ಹಾಗೂ ಕಸವಿಲೇವಾರಿಗೆ ಸೂಕ್ತ ಕ್ರಮಕೈಗೊಳ್ಳುವ ಬಗ್ಗೆ ಶಾಸಕರಿಗೆ ಮನವಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಪಟ್ಟಣದ ಸರ್ಕಾರಿ